NEWS HIGHLIGHTS
ಶಿವಮೊಗ್ಗ: ತುಂಗಾ ಜಲಾಶಯದ ಒಳ ಮತ್ತು ಹೊರ ಹರಿವು (Outflow) ಹೆಚ್ಚಳವಾಗಿದೆ. ಇದರಿಂದ ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಶಿವಮೊಗ್ಗ ನಗರದ ಕೋರ್ಪಲಯ್ಯ ಛತ್ರ ಮಂಟಪ ಮುಕ್ಕಾಲು ಭಾಗ ಮುಳುಗಿದೆ.
➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.ಎಲ್ಲ ಗೇಟ್ ಓಪನ್
ತುಂಗಾ ಜಲಾಶಯ ಈಗಾಗಲೇ ಭರ್ತಿಯಾಗಿದೆ. ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚಾಗಿದ್ದರಿಂದ ಜಲಾಶಯಕ್ಕೆ 31 ಸಾವಿರ ಕ್ಯೂಸೆಕ್ ಒಳ ಹರಿವು ಇದೆ. 27 ಸಾವಿರ ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ತುಂಗಾ ಜಲಾಶಯದ ಎಲ್ಲ ಗೇಟುಗಳನ್ನು ತೆರೆಯಲಾಗಿದೆ.
ಮಂಟಪ ಮುಕ್ಕಾಲು ಮುಳುಗಡೆ
ಇನ್ನು, ತುಂಗಾ ಜಲಾಶಯದ ಹೊರ ಹರಿವು ಹೆಚ್ಚಳವಾಗಿದೆ. ಇದರಿಂದ ತುಂಗಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಶಿವಮೊಗ್ಗ ನಗರದಲ್ಲಿರುವ ಕೋರ್ಪಲಯ್ಯ ಛತ್ರ ಮಂಟಪ ಮುಕ್ಕಾಲು ಭಾಗ ಮುಳುಗಡೆಯಾಗಿದೆ.

ಈ ಮಳೆಗಾಲದಲ್ಲಿ ಇದೇ ಮೊದಲ ಬಾರಿಗೆ ತುಂಗಾ ನದಿಯಲ್ಲಿ ಇಷ್ಟು ಪ್ರಮಾಣದ ನೀರು ಹರಿಯುತ್ತಿರುವುದು ಮತ್ತು ಮಂಟಪ ಮುಕ್ಕಾಲು ಭಾಗ ಮುಳುಗಡೆಯಾಗಿದೆ. ಹಾಗಾಗಿ ಜನರು ತುಂಗಾ ನದಿ ಸೇತುವೆ ಮೇಲೆ ನಿಂತು ಮಂಟಪ ಮುಳುಗಡೆ ಮತ್ತು ತುಂಗಾ ನದಿಯನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ » ಮೈದುಂಬಿದ ಜೋಗ ಜಲಪಾತ, ವೈಭವ ಕಣ್ತುಂಬಿಕೊಳ್ಳಲು ವಾರದ ದಿನವು ಪ್ರವಾಸಿಗರ ದಂಡು

