ಒಂದು ಮೊಬೈಲ್ ಕಳ್ಳತನ ಪ್ರಕರಣದ ಬೆನ್ನು ಹತ್ತಿದ ಪೊಲೀಸರಿಗೆ ಸಿಕ್ತು 7 ಮೊಬೈಲ್, 3 ಬೈಕ್, 2 ಅರೆಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 NOVEMBER 2022

SHIMOGA | ಒಂದು ಮೊಬೈಲ್ ಫೋನ್ (mobile theft) ಕಳ್ಳತನ ಪ್ರಕರಣದ ಬೆನ್ನು ಹತ್ತಿದ ಪೊಲೀಸರು ನಾಲ್ಕು ಪ್ರಕರಣಕ್ಕೆ ಸಂಬಂಧಿಸಿ 7 ಮೊಬೈಲ್, 3 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

Shimoga Nanjappa HOspital

ನ.5ರಂದು ಶಿವಮೊಗ್ಗದ ಚನ್ನಪ್ಪ ಲೇಔಟ್ ನಲ್ಲಿ ಮೊಬೈಲ್ ನಲ್ಲಿ ಮಾತನಾಡುತ್ತ ಹೋಗುತ್ತಿದ್ದ ಶರತ್ ಎಂಬಾತನ ಮೊಬೈಲನ್ನು ಆರೋಪಿಗಳು ಕಸಿದು ಪರಾರಿಯಾಗಿದ್ದರು. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿತ್ತು.

(mobile theft)

ಅಪ್ರಾಪ್ತ ಸೇರಿ ಇಬ್ಬರು ಸಿಕ್ಕಿಬಿದ್ದರು

ತನಿಖೆ ನಡೆಸಿದ ಜಯನಗರ ಠಾಣೆ ಪೊಲೀಸರು ಓರ್ವ ಅಪ್ರಾಪ್ತ ಸೇರಿ ಇಬ್ಬರನ್ನು ಬಂಧಿಸಿದ್ದಾರೆ. ಕಾಶಿಪುರದ ಪ್ರಜ್ವಲ್ ಅಲಿಯಾಸ್ ಪ್ರಜ್ಜು (21) ಮತ್ತು ಅಪ್ರಾಪ್ತನನ್ನು ಬಂಧಿಸಲಾಗಿದೆ. ಇವರ ವಿಚಾರಣೆ ವೇಳೆ ಇನ್ನಷ್ಟು ಮೊಬೈಲ್ ಫೋನ್, ಬೈಕುಗಳು ಪತ್ತೆಯಾಗಿವೆ.

(mobile theft)

ನಾಲ್ಕು ಪ್ರಕರಣಗಳನ್ನು ಬಾಯಿ ಬಿಟ್ಟರು

ವಿಚಾರಣೆ ವೇಳೆ ಆರೋಪಿಗಳು ನಾಲ್ಕು ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. 1 ಸುಲಿಗೆ, 1 ಮೊಬೈಲ್ ಕಳ್ಳತನ, 2 ದ್ವಿಚಕ್ರ ವಾಹನ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದರು. ಆರೋಪಿಗಳಿಂದ 1.71 ಲಕ್ಷ ರೂ. ಮೌಲ್ಯದ 7 ಮೊಬೈಲ್ ಫೋನ್, 3 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದ 6 ಪೊಲೀಸ್ ಠಾಣೆಯ 82 ರೌಡಿಗಳನ್ನು ಸಾಲಾಗಿ ನಿಲ್ಲಿಸಿ ವಾರ್ನಿಂಗ್ ನೀಡಿದ ಎಸ್.ಪಿ

ಇನ್ಸ್ ಪೆಕ್ಟರ್ ಮಾದಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.

Atiyas Motors Shimoga

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 17, 2022

Leave a Comment