ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
SHIVAMOGGA LIVE NEWS | 31 DECEMBER 2023
SHIMOGA : ಹೆದ್ದಾರಿಯಲ್ಲಿ ಕಾರು ನಿಲ್ಲಿಸಿ ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿದ ಇಬ್ಬರು ಯುವಕರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇವರಿಂದ ಒಂದು ಏರ್ ಗನ್ ಮತ್ತು ಕಾರನ್ನು ವಶಕ್ಕೆ ಪಡೆಯಲಾಗಿದೆ.
ಏನಿದು ಘಟನೆ?
ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ಸಮೀಪ ಶಿವಮೊಗ್ಗ – ಭದ್ರಾವತಿ ಹೆದ್ದಾರಿಯಲ್ಲಿ ಡಿ.26ರಂದು ಇಬ್ಬರು ಯುವಕರು ಕಾರಿನಿಂದ ಇಳಿದು ಕುಣಿದಿದ್ದಾರೆ. ಇದೇ ವೇಳೆ ಒಬ್ಬಾತ ಏರ್ ಗನ್ ಹಿಡಿದುಕೊಂಡಿದ್ದು ಅದರಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದ. ಬಳಿಕ ಏರ್ ಗನ್ ಹಿಡಿದುಕೊಂಡು ಕಾರಿನಲ್ಲಿ ತೆರಳಿದ್ದರು. ಘಟನೆಯಿಂದ ರಸ್ತೆಯಲ್ಲಿ ಓಡಾಡುತ್ತಿದ್ದವರು ಆತಂಕಕ್ಕೀಡಾಗಿದ್ದರು.
ವೈರಲ್ ವಿಡಿಯೋ ಬೆನ್ನು ಬಿದ್ದ ಪೊಲೀಸ್
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪರಿಶೀಲನೆ ನಡೆಸಿದ ತುಂಗಾ ನಗರ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಸಿರಗನಹಳ್ಳಿಯ ಹರ್ಷ ಪಟೇಲ್ (23) ಮತ್ತು ಅಜ್ಜಂಪುರದ ಅಭಿಷೇಕ್ (23) ಬಂಧಿತರು. ಅಜಾಗರೂಕತೆ ಮತ್ತು ಬೇಜವಾಬ್ದಾರಿ ತೋರಿದ ಹಿನ್ನೆಲೆ ವಿವಿಧ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲು ಮಾಡಲಾಗಿದೆ. ತುಂಗಾ ನಗರ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ – ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಕವರ್‌ನಲ್ಲಿ ಚಿನ್ನದ ನಾಣ್ಯ ಮಾರಾಟ, ಕೊಡಗಿನಿಂದ ಬಂದ ಯುವಕ, ಮುಂದೇನಾಯ್ತು?






