ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | SHIMOGA| 20 ಜೂನ್ 2022
ಪೊಲೀಸರನ್ನು ಕಂಡು ಪರಾರಿಯಾಗುತ್ತಿದ್ದ ಇಬ್ಬರನ್ನು ಬೆನಟ್ಟಿದಾಗ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿವೆ. ಘಟನೆಯಲ್ಲಿ ಓರ್ವ ಆರೋಪಿ ಪರಾರಿಯಾಗಿದ್ದು, ಮತ್ತೊಬ್ಬ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
ಟಿಪ್ಪುನಗರದ ಮೊಹಮದ್ ಸಲ್ಮಾನ್ (20) ಬಂಧಿತ. ಪರಾರಿಯಾದವನನ್ನು ಹೊಸಮನೆಯ ರಾಘವೇಂದ್ರ ಅಲಿಯಾಸ್ ರಘು ಎಂದು ಗುರುತಿಸಲಾಗಿದೆ.
ಚೆಕ್ ಪೋಸ್ಟ್ ಬಳಿ ಎಸ್ಕೇಪ್ ಯತ್ನ
ಆರೋಪಿಗಳು ಎರಡು ಟಿವಿಎಸ್ ಎಕ್ಸಲ್ ಮೊಪೆಡ್’ಗಳಲ್ಲಿ ಅಣ್ಣಾನಗರದ ಕಡೆಯಿಂದ ಬಸ್ ನಿಲ್ದಾಣದ ಕಡೆಗೆ ಬರುತ್ತಿದ್ದರು. ಮಿಳಘಟ್ಟದ ಬಳಿ ಪೊಲೀಸರು ಚೆಕ್ ಪೋಸ್ಟ್ ನಿರ್ಮಿಸಿಕೊಂಡು ವಾಹನಗಳ ತಪಾಸಣೆ ನಡೆಸುತ್ತಿದ್ದರು. ಪೊಲೀಸರನ್ನು ಕಂಡ ಕೂಡಲೆ ಇಬ್ಬರು ಆರೋಪಿಗಳು ಬೈಕ್’ಗಳನ್ನು ತಿರುಗಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ.
ಅನುಮಾನಾಸ್ಪದ ವರ್ತನೆ ಹಿನ್ನೆಲೆ ಪೊಲೀಸರು ಆರೋಪಿಗಳ ಬೆನ್ನಟ್ಟಿದ್ದಾರೆ. ಈ ವೇಳೆ ರಾಘವೇಂದ್ರ ಎಂಬಾತ ಬೈಕ್ ಬಿಟ್ಟು ಪರಾರಿಯಾಗಿದ್ದಾನೆ. ಮೊಹಮದ್ ಸಲ್ಮಾನ್ ಸಿಕ್ಕಿಬಿದ್ದಿದ್ದಾನೆ.
ಕದ್ದ ಟಿವಿಎಸ್ ಮಾರಾಟಕ್ಕೆ ಹೊರಟಿದ್ದರು
ವಿಚಾರಣೆ ವೇಳೆ ಗಾಂಧಿ ನಗರ ಮತ್ತು ನವುಲೆಯಲ್ಲಿ ಟಿವಿಎಸ್ ಎಕ್ಸೆಲ್ ಮೊಪೆಡ್’ಗಳನ್ನು ಕದ್ದಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಕದ್ದ ಟಿವಿಎಸ್ ಎಕ್ಸೆಲ್ ವಾಹನಗಳನ್ನು ಮಾರಾಟ ಮಾಡಲು ತೆರಳುತ್ತಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾನೆ.
ದೊಡ್ಡಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ – ಕಳೆನಾಶಕ ಸೇವಿಸಿ ಗ್ರಾಮ ಪಂಚಾಯಿತಿ ಸದಸ್ಯೆ ಆತ್ಮಹತ್ಯೆಗೆ ಯತ್ನ
ಇದನ್ನೂ ಓದಿ – ಪಿಂಚಣಿಗಾಗಿ ಕಾದು ಕಾದು ಕಚೇರಿ ಮುಂದೆಯೇ ಕುಸಿದು ಬಿದ್ದ ವೃದ್ಧೆ


ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















