ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 6 NOVEMBER 2023
SHIMOGA : ರೈಲ್ವೆ ನಿಲ್ದಾಣದ ಪಾರ್ಕಿಂಗ್ ಸ್ಥಳದ ಸಮೀಪ ಪತ್ತೆಯಾದ ಅನುಮಾನಾಸ್ಪದ ಬಾಕ್ಸ್‌ಗಳನ್ನು ತೆರೆಯಲು ಬಾಂಬ್ ನಿಷ್ಕ್ರಿಯ ದಳ ಸ್ಪೋಟಕ ಬಳಕೆ ಮಾಡಿತು. ಎರಡು ಬಾಕ್ಸ್‌ಗಳನ್ನು ಓಪನ್ ಮಾಡಲು ಪ್ರತ್ಯೇಕವಾಗಿ ಸ್ಪೋಟ ನಡೆಸಲಾಯಿತು.
ಎರಡು ಬಾಕ್ಸ್‌ಗಳ ಕುರಿತು ತೀವ್ರ ಅನುಮಾನ ವ್ಯಕ್ತವಾಗಿತ್ತು. ಈ ಹಿನ್ನೆಲೆ ಬೆಂಗಳೂರಿನಿಂದ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಆಗಮಿಸಿತ್ತು. ಹಲವು ಬಾರಿ ಪ್ರಯತ್ನಿಸಿದರು ಟ್ರಂಕ್ ತೆರೆಯಲು ಸಾಧ್ಯವಾಗಲಿಲ್ಲ. ಈ ಹಿನ್ನೆಲೆ ಸ್ಪೋಟ ನಡೆಸಲು ಯೋಜಿಸಲಾಯಿತು.
ಸ್ಪೋಟಕ ಅಳವಡಿಸಿ ರಾತ್ರಿ 2.40ಕ್ಕೆ ಮೊದಲ ಬಾರಿ ಸ್ಪೋಟಿಸಿ ಒಂದು ಟ್ರಂಕ್ ತೆರೆಯಲಾಯಿತು. ಅದರಲ್ಲಿ ಕೆಲವು ನ್ಯೂಸ್ ಪೇಪರ್‌ಗಳು, ಬಿಳಿ ಬಣ್ಣದ ಪೌಡರ್ ಇರುವ ಪ್ಯಾಕೆಟ್ ದೊರೆತಿದೆ. ರಾತ್ರಿ 3.24ಕ್ಕೆ ಎರಡನೇ ಬಾರಿ ಸ್ಪೋಟಿಸಿ ಮತ್ತೊಂದು ಟ್ರಂಕ್ ತೆಗೆಯಲಾಯಿತು. ಅದರಲ್ಲಿಯು ನ್ಯೂಸ್ ಪೇಪರ್ ಮತ್ತು ಬಿಳಿ ಬಣ್ಣದ ಪೌಡರ್ ದೊರೆತಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಬಾಂಬ್ ನಿಷ್ಕ್ರಿಯ ದಳದಿಂದ ಬಾಕ್ಸ್‌ಗಳ ಪರಿಶೀಲನೆ, ಕಾರ್ಯಾಚರಣೆಗೆ ಅಡ್ಡಿಯಾದ ಮಳೆ
ಟ್ರಂಕ್ ಮತ್ತು ಬಿಳಿ ಬಣ್ಣದ ಪೌಡರ್ ಇರುವ ಚೀಲಗಳನ್ನು ಬಾಂಬ್ ನಿಷ್ಕ್ರಿಯ ದಳ ವಶಕ್ಕೆ ಪಡೆದಿದೆ. ಅವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422