ಶಿವಮೊಗ್ಗ: ಎನ್ಇಎಸ್ ಹವ್ಯಾಸಿ ರಂಗತಂಡದ ವತಿಯಿಂದ ಜೂ.17 ಮತ್ತು 18 ರಂದು ರಷ್ಯಾದ ಖ್ಯಾತ ಬರಹಗಾರ ಆಯ್ಯಂಟನ್ ಚೆಕಾವ್ ಅವರ ಸಣ್ಣ ಕಥೆಗಳನ್ನು ಆಧರಿಸಿದ ಡಾ.ಹೇಮಪಟ್ಟಣಶೆಟ್ಟಿ ವಿರಚಿತ ನಾಟಕ (Drama) ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.
ಜೂ.17 ರ ಸಂಜೆ 6.30ಕ್ಕೆ ಸುವರ್ಣ ಸಂಸ್ಕೃತಿ ಭವನದಲ್ಲಿ ನಾಟಕ ಪ್ರದರ್ಶನ ನಡೆಯಲಿದೆ. ಜೂ.18 ರಂದು ಕರ್ನಾಟಕ ಸಂಘದಲ್ಲಿ ಸಂಜೆ 6.30ಕ್ಕೆ ಪ್ರದರ್ಶನ ಏರ್ಪಡಿಸಲಾಗಿದೆ.
ಎನ್ಇಎಸ್ ಬಿಎಡ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಕೆ.ಚಿದಾನಂದ ನಟಿಸಿ, ನಿರ್ದೇಶಿಸಿ, ರಂಗವಿನ್ಯಾಸ ಮಾಡಿದ್ದು, ಭದ್ರಾವತಿಯ ಲಕ್ಷ್ಮೀ ನಾಟಕದ ಪ್ರಸಾಧನ ಮತ್ತು ವಸ್ತ್ರ ವಿನ್ಯಾಸ ನಿರ್ವಹಿಸಲಿದ್ದಾರೆ. ಹರಿಗೆ ಗೋಪಾಲಸ್ವಾಮಿ ಬೆಳಕಿನ ವಿನ್ಯಾಸ ರೂಪಿಸಿದ್ದು, ವಿನ್ಯಾಸ್ ಸಂಗೀತ ನಿರ್ವಹಣೆ ಮಾಡಲಿದ್ದಾರೆ.
ಎನ್ಇಎಸ್ ಸಂಸ್ಥೆಯ ನೌಕರರು ಹಾಗೂ ವಿದ್ಯಾರ್ಥಿಗಳು ಹವ್ಯಾಸಿ ರಂಗತಂಡದ ಮುಖ್ಯ ರುವಾರಿಗಳಾಗಿದ್ದಾರೆ. ಕಲಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ » ದಾಸರಕಲ್ಲಹಳ್ಳಿಯಲ್ಲಿ ಬೆಳಗ್ಗೆಯಿಂದ ಬಡಿಗೆ ಹಿಡಿದು ಓಡಾಡುತ್ತಿರುವ ಗ್ರಾಮಸ್ಥರು, ಮಕ್ಕಳು, ಕಾರಣವೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200