ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | BABY DEATH| 08 ಮೇ 2022
ಮೆಗ್ಗಾನ್ ಆಸ್ಪತ್ರೆಯಲ್ಲಿ ಎರಡೂವರೆ ತಿಂಗಳ ಮಗು ಮೃತಪಟ್ಟಿದೆ. ವೈದ್ಯರ ನಿರ್ಲಕ್ಷ್ಯದಿಂದಲೇ ಮಗು ಸಾವನ್ನಪ್ಪಿದೆ ಎಂದು ಪೋಷಕರು ಆರೋಪಿಸಿದ್ದಾರೆ.
ಹೊಸನಗರ ತಾಲೂಕಿನ ಹಿಂಡ್ಲುಮನೆಯ ಅರುಣ್ ಮತ್ತು ರೂಪಾ ದಂಪತಿ ಕಫದ ಸಮಸ್ಯೆಯಿಂದ ಬಳಲುತ್ತಿದ್ದ ತಮ್ಮ ಮಗುವನ್ನುಗುರುವಾರ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿನ ವೈದ್ಯಾಧಿಕಾರಿ ಸೂಚನೆ ಮೇರೆಗೆ ಅದೇ ದಿನ ಸಂಜೆ ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಗುರುವಾರ ಸಂಜೆಯಿಂದ ಆರೋಗ್ಯವಾಗಿದ್ದ ಮಗುವಿನ ಸ್ಥಿತಿ ಶನಿವಾರ ಬೆಳಗ್ಗೆ ಗಂಭೀರವಾಗಿದೆ. ಆನಂತರ ವೈದ್ಯರು ತಪಾಸಣೆ ನಡೆಸಿದ್ದು ಮಧ್ಯಾಹ್ನ 12ಕ್ಕೆ ಮೃತಪಟ್ಟಿದೆ ಎಂದು ತಿಳಿಸಿದ್ದಾರೆ. ಇದರಿಂದ ಶಾಕ್ಗೆ ಒಳಗಾದ ಪಾಲಕರು, ಎರಡು ದಿನ ಆಸ್ಪತ್ರೆಯಲ್ಲೇ ದಾಖಲಾಗಿದ್ದರೂ ಮಗುವಿಗೆ ಸೂಕ್ತ ಚಿಕಿತ್ಸೆ ಕೊಡಲಿಲ್ಲ. ವೈದ್ಯರ ನಿರ್ಲಕ್ಷದಿಂದ ನಮ್ಮ ಮಗು ಸಾವನ್ನಪ್ಪಿದೆ ಎಂದು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ – ವಿದ್ಯುತ್ ಕಂಬದಿಂದ ಬಿದ್ದು ಸೊಂಟ ಮುರಿದುಕೊಂಡ ಕಾರ್ಮಿಕ, ಗುತ್ತಿಗೆದಾರನ ವಿರುದ್ಧ ಕೇಸ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422