
ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಜುಲೈ 2020
ಇನ್ನೆರಡು ತಿಂಗಳಲ್ಲಿ ಶಿವಮೊಗ್ಗ ನಗರದಲ್ಲಿ ಗಾಂಜಾ ಮಾರಾಟಗಾರರನ್ನು ಮಟ್ಟಹಾಕಬೇಕು. ರೌಡಿಗಳನ್ನು ನಿಗ್ರಹಿಸಬೇಕು. ಇದರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ‍್ವರಪ್ಪ ಅವರ ಖಡಕ್ ಸೂಚನೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೊಲೀಸರ ಜೊತೆಗೆ ಇವತ್ತು ಸಭೆ ನಡೆಸಿದ ಸಚಿವ ಈಶ್ವರಪ್ಪ, ಯಾವುದೇ ಕಾರಣಕ್ಕೂ ಶಿವಮೊಗ್ಗದಲ್ಲಿ ಗಾಂಜಾ ಮಾರಾಟಕ್ಕೆ ಅವಕಾಶ ನೀಡಬಾರದು ಎಂದು ಸೂಚನೆ ನೀಡಿದರು.

ಎರಡೇ ತಿಂಗಳು ಟೈಮ್
ಗಾಂಜಾ ನಿಯಂತ್ರಣಕ್ಕೆ ಎರಡು ತಿಂಗಳು ಕಾಲವಕಾಶ ನೀಡಲಾಗುತ್ತದೆ. ಈ ಅವಧಿಯಲ್ಲಿ ಸಂಪೂರ್ಣ ನಿಯಂತ್ರಣಕ್ಕೆ ಬರಬೇಕು. ಪೊಲೀಸ್ ಇಲಾಖೆ ಒಳಗೆ ಗಾಂಜಾ ಮಾರಾಟಗಾರರ ಜೊತೆಗೆ ಶಾಮೀಲಾದವರು ಯಾರಾದರೂ ಇದ್ದರೆ ಕೂಡಲೇ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದರು.
ರೌಡಿ, ಪುಡಿ ರೌಡಿಗಳ ನಿಗ್ರಹಿಸಿ
ನಗರದಲ್ಲಿ ರೌಡಿಗಳು, ಪುಡಿ ರೌಡಿಗಳನ್ನು ಮಟ್ಟಹಾಕಬೇಕು. ವಾಹನಗಳಿಗೆ ಬೆಂಕಿ ಹಚ್ಚುವುದು, ಕೂಲಿ ಮಾಡುವವರ ಮನೆಗೆ ನುಗ್ಗಿ ದರೋಡೆ ಮಾಡುವ ಪ್ರಕರಣಗಳು ಸಂಭವಿಸಿವೆ. ಇಂತಹವರ ವಿರುದ್ಧ ಬಿಗಿ ಕಾನೂನು ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.
ಆರ್ಯ ವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಧಿಕಾರಿ ಕೆ.ಎಂ.ಶಾಂತರಾಜು, ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್, ಡಿವೈಎಸ್‍ಪಿ ಈಶ್ವರ್ ಉಮೇಶ್ ನಾಯಕ್, ವಿವಿಧ ಠಾಣೆಯ ಇನ್ಸ್‍ಪೆಕ್ಟರ್‍ಗಳಾದ ವಸಂತ್ ಕುಮಾರ್, ಸಂಜೀವ್ ಕುಮಾರ್ ಸೇರಿದಂತೆ ಹಲವರು ಸಭೆಯಲ್ಲಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200