ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಜೂನ್ 2020
ಶಿವಮೊಗ್ಗ ನಗರದ ಕುಂಬಾರ ಬೀದಿಯ ಸೋಂಕಿತ ವ್ಯಕ್ತಿಯಿಂದ ಮತ್ತಿಬ್ಬರಿಗೆ ಕರೋನ ಸೋಂಕು ತಗುಲಿದೆ. ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ನಲ್ಲಿ ಇರಿಸಿ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ತಗುಲಿರುವುದು ದೃಢವಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಪಿ6419ಗೆ ಕೆಲ ದಿನದ ಹಿಂದೆ ಸೋಂಕು ತಗುಲಿತ್ತು. ಹಾಗಾಗಿ ಅವರ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರನ್ನು ಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು. ಇವರ ಸ್ವ್ಯಾಬ್ ಟೆಸ್ಟ್ ಮಾಡಿದಾಗ, ಸೋಂಕಿತನ ತಂದೆ ಮತ್ತು ತಾಯಿಗೆ ಕರೋನ ಪಾಸಿಟಿವ್ ಬಂದಿದೆ. ಪಿ7270 (78 ವರ್ಷದ ಮಹಿಳೆ), ಪಿ7271 (80 ವರ್ಷದ ಪುರುಷ) ಇವರಿಗೆ ಸೋಂಕು ತಗುಲಿದೆ.
ಪಿ6419ಗೆ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಕುಂಬಾರ ಬೀದಿಯನ್ನು ಕಂಟೈನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ರಸ್ತೆಯನ್ನು ಸೀಲ್ ಡೌನ್ ಮಾಡಿ, ಸ್ಯಾನಿಟೈಸ್ ಮಾಡಲಾಗುತ್ತಿದೆ. ರಸ್ತೆಯಲ್ಲಿರುವ ಪ್ರತಿಯೊಬ್ಬರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]