ಶಿವಮೊಗ್ಗ ನಗರದ ಮತ್ತೆರಡು ರಸ್ತೆಗಳು ಇವತ್ತು ಸೀಲ್ ಡೌನ್, ಶುರುವಾಯ್ತು ಸ್ಯಾನಿಟೈಸೇಷನ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಜೂನ್ 2020

ಶಿವಮೊಗ್ಗ ನಗರದಲ್ಲಿ ಇವತ್ತು ಮತ್ತೆ ಎರಡು ರಸ್ತೆಗಳನ್ನು ಇವತ್ತು ಸೀಲ್ ಡೌನ್ ಮಾಡಲಾಗಿದೆ. ಇಬ್ಬರಿಗೆ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಅವರ ಮನೆಗಳಿರುವ ರಸ್ತೆಗಳಲ್ಲಿ ಜನ ಸಂಚಾರ ನಿರ್ಬಂಧಿಸಲಾಗಿದೆ.

ಗೋಪಾಲಗೌಡ ಬಡಾವಣೆ

ಗೋಪಾಲಗೌಡ ಬಡಾವಣೆಯ ಮತ್ತೊಂದು ರಸ್ತೆಯನ್ನು ಇವತ್ತು ಸೀಲ್ ಡೌನ್ ಮಾಡಲಾಗಿದೆ. ಇಲ್ಲಿನ ಡಿ ಬ್ಲಾಕ್‍ನ ರಸ್ತೆಯನ್ನು ಬ್ಯಾರಿಕೇಡ್ ಹಾಕಿ ಸೀಲ್ ಡೌನ್ ಮಾಡಲಾಗಿದೆ. ನಿವಾಸಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ, ಬ್ಯಾರಿಕೇಡ್ ಹಾಕಿ ರಸ್ತೆಯನ್ನು ಬಂದ್ ಮಾಡಲಾಗಿದೆ.

105490769 1153348045026614 451002848477808471 o.jpg? nc cat=104& nc sid=8024bb& nc ohc=9H4Nqj8gwJwAX8G5zx0& nc ht=scontent.fblr11 1

ಪಾಲಿಟೆಕ್ನಿಕ್ ಮಂದಿನ ರಸ್ತೆ

ಗೋಪಾಳದ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಎದುರಿನ ವಿವೇಕಾನಂದ ಬಡಾವಣೆಯ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ. ಇಲ್ಲಿನ ನಿವಾಸಿಯೊಬ್ಬರಲ್ಲೂ ಸೋಂಕು ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ. ಇದರಿಂದ ಈ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ.

ರಸ್ತೆಯಲ್ಲಿ ಸ್ಯಾನಿಟೈಸೇಷನ್

ಸೀಲ್ ಡೌನ್ ಮಾಡಿರುವ ರಸ್ತೆಗಳನ್ನು ಸಂಪೂರ್ಣ ಸ್ಯಾನಿಟೈಸೇಷನ್ ಮಾಡಲಾಗಿದೆ. ಇನ್ನು ಇಲ್ಲಿರುವ ಮನೆಗಳಲ್ಲಿ ಯಾರೆಲ್ಲ ಇದ್ದಾರೆ, ಅವರ ಆರೋಗ್ಯದ ಸ್ಥಿತಿಗತಿಯೇನು ಅನ್ನುವ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಎಲ್ಲರಿಗೂ ನಿರಂತರ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ.  

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment