ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
Published On: 11 October 2025
ಶಿವಮೊಗ್ಗ: ವಿಶೇಷ ಚೇತನ ಮಕ್ಕಳು ಮತ್ತು ಕ್ಯಾನ್ಸರ್ ಬಾಧಿತ ಮಕ್ಕಳ ಆರೈಕೆ ಹಾಗೂ ಶಿಕ್ಷಣಕ್ಕಾಗಿ ಪ್ರತ್ಯೇಕ ಶಾಲೆಗಳನ್ನು (Special Schools) ಆರಂಭಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಪತ್ರಿಕಾ ಭವನದಲ್ಲಿ ಪತ್ರಕರ್ತರ ಜೊತೆ ಸಂವಾದದಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಇವೆರಡು ಮಾದರಿ ಶಾಲೆಗಳನ್ನು ಆರಂಭಿಸುವ ಗುರಿ ಇದೆ ಎಂದರು.
ತೀರ್ಥಹಳ್ಳಿಯಲ್ಲಿ ವಿಶೇಷ ಚೇತನರ ಶಾಲೆ
ತೀರ್ಥಹಳ್ಳಿಯಲ್ಲಿ ಶಾಲೆಯೊಂದರಲ್ಲಿ ವಿಶೇಷ ಚೇತನರಿಗೆ ವಿಶೇಷ ಆರೈಕೆ ನೀಡಲಾಗುತ್ತಿದೆ. ಅಲ್ಲಿಗೆ ಹೋದಾಗ ನನಗೆ ಕಣ್ಣೀರು ಬಂತು. ಶಿಕ್ಷಕ ಕುಮಾರ್ ಅವರು ತಮ್ಮ ಜೀವನವನ್ನೆ ಆ ಮಕ್ಕಳಿಗಾಗಿ ಮೀಸಲಿಟ್ಟಿದ್ದಾರೆ. ಇಂತಹ ಮಕ್ಕಳ ಆರೈಕೆಗಾಗಿ ಅಲ್ಲಿ ವಸತಿ ಶಾಲೆ ತೆರೆಯುವ ಉದ್ದೇಶವಿದೆ.
ಡಿಡಿಪಿಐ ಅವರು ಈಗಾಗಲೆ ಜಾಗ ಗುರುತಿಸಿದ್ದಾರೆ. ಇನ್ನು ಶಿಕ್ಷಕ ಕುಮಾರ್ ಅವರ ಸೇವಾವಧಿ ಡಿಸೆಂಬರ್‌ಗೆ ಮುಗಿಯಲಿದೆ. ಅವರ ಸೇವಾವಧಿ ವಿಸ್ತರಣೆ ಆಗಬೇಕಿದ್ದರೆ ಸಂಪುಟದಲ್ಲಿ ತೀರ್ಮಾನ ಆಗಬೇಕು. ಆ ಪ್ರಕ್ರಿಯೆ ನಡೆಯಲಿದೆ.

ಕ್ಯಾನ್ಸರ್ ಬಾಧಿತ ಮಕ್ಕಳಿಗೆ ವಸತಿ ಶಾಲೆ
ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಶಾಲೆ ತೆರೆಯುವ ಉದ್ದೇಶ ಇದೆ. ಕ್ಯಾನ್ಸರ್ ಗುಣ ಮಾಡಬಹುದಾದ ಕಾಯಿಲೆ. ನಟ ಶಿವರಾಜ ಕುಮಾರ್ ಸೇರಿ ಹಲವರು ಇದಕ್ಕೆ ಉದಾಹರಣೆ. ಇಂತಹ ಮಕ್ಕಳಿಗೆ ಒಂದರಿಂದ ಹತ್ತನೆ ತರಗತಿವರೆಗೆ ವಸತಿ ಶಾಲೆ ನಿರ್ಮಿಸಲಾಗುತ್ತದೆ. ಇದಕ್ಕಾಗಿ ಸರ್ಕಾರೇತರ ಸಂಸ್ಥೆ ಮುಂದೆ ಬಂದಿದೆ. ಕಿದ್ವಾಯಿ ಬಳಿ ಶಾಲೆ ಆರಂಭಿಸಲಾಗುತ್ತದೆ.
ಉದ್ಯಮಿಗಳಾದ ಅಜೀಂ ಪ್ರೇಮ್‌ಜಿ, ಸುಧಾ ಮೂರ್ತಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದೇನೆ. ಅಲ್ಲಿ ಆ ಮಕ್ಕಳಿಗೆ ಚಿಕಿತ್ಸೆ ಮತ್ತು ಶಿಕ್ಷಣ ಲಭ್ಯವಾಗಲಿದೆ.
ಶಿವಮೊಗ್ಗ ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್.ಮಂಜುನಾಥ್, ಕಾರ್ಯದರ್ಶಿ ನಾಗರಾಜ ನೇರಿಗೆ ಉಪಸ್ಥಿತರಿದ್ದರು.
Special Schools
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















