ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 2 FEBRUARY 2023
SHIMOGA | ಭಾಷಣ ಸ್ಪರ್ಧೆಯಲ್ಲಿ ಜಿಲ್ಲೆಯ ಇಬ್ಬರು ಯುವತಿಯರು ಬಹುಮಾನ ಗಳಿಸಿದ್ದು, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಭಾರತ ಸರ್ಕಾರ, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರದ ವತಿಯಿಂದ ರಾಷ್ಟ್ರೀಯ ಯುವ ಸಂಸತ್ತು (Yuva Samsat) ಪ್ರಯುಕ್ತ ಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಉಡುಪಿಯಲ್ಲಿ ನಡೆದ ವರ್ಚುವಲ್ ವೇದಿಕೆ ಮೂಲಕ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಶಿವಮೊಗ್ಗದ ಶಾಲಿನಿ ಅವರು ಪ್ರಥಮ ಮತ್ತು ಸಿಂಚನಾ ಅವರು ದ್ವಿತೀಯ ಸ್ಥಾನ ಪಡೆದಿದ್ದಾರೆ. ಇಬ್ಬರು ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕೆಲಸದ ವಿಚಾರ, ಪೋಸ್ಟ್ ವೈರಲ್ ಬೆನ್ನಿಗೆ ಪೊಲೀಸರು ಅಲರ್ಟ್
ರಾಜ್ಯ ಮಟ್ಟದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ರಾಷ್ಟ್ರೀಯ ಮಟ್ಟದಲ್ಲಿ ದೆಹಲಿಯ ಸಂಸತ್ತಿನಲ್ಲಿ ಮಾತನಾಡುವ ಅವಕಾಶ ದೊರೆಯುತ್ತದೆ. ರಾಷ್ಟ್ರ ಮಟ್ಟದಲ್ಲಿ ಪ್ರಥಮ ಬಹುಮಾನ 2 ಲಕ್ಷ ರೂ, ದ್ವಿತೀಯ ಬಹುಮಾನ 1.5 ಲಕ್ಷ ರೂ. ಮತ್ತು ತೃತೀಯ ಬಹುಮಾನ 1 ಲಕ್ಷ ರೂ ಇರಲಿದೆ. ಇಬ್ಬರಿಗೆ ಸಮಾಧಾನಕರ ಬಹುಮಾನವಾಗಿ 50 ಸಾವಿರ ರೂ. ನೀಡಲಾಗುವುದು ಎಂದು ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ಕೆಟಿಕೆ ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗ ಹಾಲು ಒಕ್ಕೂಟದಲ್ಲಿ ಹಲವು ಕೆಲಸ ಖಾಲಿ ಇದೆ, 97 ಸಾವಿರದ ವರೆಗೂ ಸಿಗಲಿದೆ ಸಂಬಳ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422