ಶಿವಮೊಗ್ಗ : ಜಿಲ್ಲಾಡಳಿತದಿಂದ ನಗರದ ಎಟಿಎನ್‌ಸಿ ಕಾಲೇಜಿನಲ್ಲಿ ಫೆ. 24ರಂದು ಬೆಳಿಗ್ಗೆ 9.30ಕ್ಕೆ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ ಹೇಳಿದರು.
ಜಿಲ್ಲಾ ಮಟ್ಟದ ಉದ್ಯೋಗ ಮೇಳ (ಕೌಶಲ ಮತ್ತು ರೋಜ್‌ಗಾರ್ ಮೇಳ) ಆಯೋಜಿಸುವ ಕುರಿತು ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಉದ್ಯೋಗ ಮೇಳ ಉದ್ಘಾಟನೆಗೆ ಮಿನಿಸ್ಟರ್
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಯೋಗ ಮೇಳ ಉದ್ಘಾಟಿಸಲಿದ್ದಾರೆ. 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಮೇಳದಲ್ಲಿ ಭಾಗವಹಿಸಲಿವೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ನೇಮಕಾತಿ ಪತ್ರ ನೀಡಲಾಗುವುದು ಎಂದರು.
ಉದ್ಯೋಗ ಮೇಳವನ್ನು ಅಚ್ಚುಕಟ್ಟಾಗಿ ಮತ್ತು ವ್ಯವಸ್ಥಿತವಾಗಿ ಆಯೋಜಿಸಬೇಕು. ಯಾವ ಕೊಠಡಿಯಲ್ಲಿ ಯಾರಿಗೆ ಸಂದರ್ಶನ ನಡೆಯಲಿದೆ ಎಂಬ ಫಲಕ ಅಳವಡಿಸಬೇಕು. ಕುಡಿಯುವ ನೀರು ಹಾಗೂ ಇತರೆ ಮೂಲಸೌಕರ್ಯ ವ್ಯವಸ್ಥೆಯನ್ನು ಸಮರ್ಪಕವಾಗಿ ಕಲ್ಪಿಸಬೇಕು.
ಎನ್.ಹೇಮಂತ್, ಜಿಲ್ಲಾ ಪಂಚಾಯಿತಿ ಸಿಇಒ
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಮತ್ತು ತಾಲೂಕು ಘಟಕದ ಉಪಾಧ್ಯಕ್ಷರು, ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.
ಹೆಸರು ನೋಂದಣಿಗೆ ಶುರು
ಉದ್ಯೋಗ ಮೇಳದಲ್ಲಿ 50ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಳ್ಳಲಿವೆ. ಯುವನಿಧಿ ಫಲಾನುಭವಿಗಳು, ತಾಂತ್ರಿಕ ತರಬೇತಿ ಪಡೆದವರು, 18 ರಿಂದ 35 ವಯೋಮಿತಿಯೊಳಗಿನ ನಿರುದ್ಯೋಗಿ ಯುವಕ– ಯುವತಿಯರು ಮತ್ತು ಆಸಕ್ತರು ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಲಾಗಿದೆ.
ಮಾಹಿತಿಗೆ ದೂರವಾಣಿ ಸಂಖ್ಯೆ: 08182– 255294, 9019485688 ಸಂಪರ್ಕಿಸಬಹುದು ಎಂದು ಕೌಶಲಾಭಿವೃದ್ಧಿ ಇಲಾಖೆಯ ಜಿಲ್ಲಾ ಅಧಿಕಾರಿ ಸುರೇಶ್ ಮಾಹಿತಿ ನೀಡಿದರು.
ಇದನ್ನೂ ಓದಿ » ಬೈಕಿನಲ್ಲಿ 18 ಕೆ.ಜಿ. ಶ್ರೀಗಂಧ ಸಾಗಿಸುತ್ತಿದ್ದವರು ಅರಣ್ಯಾಧಿಕಾರಿಗಳ ಬಲೆಗೆ, ಇಬ್ಬರು ಅರೆಸ್ಟ್, ಒಬ್ಬ ಎಸ್ಕೇಪ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200