ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳ ಅಡಿಯಲ್ಲಿ ಧನಸಹಾಯ ಹಾಗೂ ಪ್ರೋತ್ಸಾಹಧನ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. (ಶಿವಮೊಗ್ಗ ಲೈವ್.ಕಾಂ | ಮುಂದಿನ 4 ಪ್ಯಾರಾಗಳು ಕೆಳಗಿವೆ)
ಉದ್ಯೋಗಿನಿ ಯೋಜನೆಯಡಿ ಸಹಾಯಧನ ಹಾಗೂ ಚೇತನ ಯೋಜನೆ, ಧನಶ್ರೀ ಯೋಜನೆ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಡಿ ಪ್ರೋತ್ಸಾಹಧನ ನೀಡಲಾಗುತ್ತಿದೆ. ಸ್ವಯಂ ಉದ್ಯೋಗ ಕೈಗೊಳ್ಳಲು ಬಯಸುವ ಅರ್ಹ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಈ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಬಹುದು. ಆಸಕ್ತ ಅರ್ಜಿಧಾರರು ಗ್ರಾಮ ಒನ್, ಶಿವಮೊಗ್ಗ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 08182-295514 ಅನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.