ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 27 SEPTEMBER 2023
SHIMOGA : ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವದ ಹಿನ್ನೆಲೆ ಶಿವಮೊಗ್ಗ ನಗರದಾದ್ಯಂತ ಅದ್ಧೂರಿ ಅಲಂಕಾರ ಮಾಡಲಾಗಿದೆ. ಗಾಂಧಿ ಬಜಾರ್ ಮುಂದೆ ಮಹಾದ್ವಾರದಲ್ಲಿ ಉಗ್ರ ನರಸಿಂಹ ಪ್ರತಿಮೆ ಸ್ಥಾಪಿಸಲಾಗಿದೆ. ಬೆಳಗ್ಗೆಯಿಂದಲು ಉಗ್ರ ನರಸಿಂಹನನ್ನು ಕಣ್ತುಂಬಿಕೊಳ್ಳಲು ಜನರು ದೊಡ್ಡ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ (Social Media) ಪ್ರತಿಮೆಯ ವಿಡಿಯೋಗಳು ವೈರಲ್ ಆಗಿವೆ.
ಶಿವಪ್ಪನಾಯಕ ಪ್ರತಿಮೆ ಮುಂಭಾಗ ನಿಂತು ಜನರು ಉಗ್ರ ನರಸಿಂಹನನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಇಲ್ಲಿಂದ ಫೋಟೊ ವಿಡಿಯೋಗಳನ್ನು ತೆಗೆದುಕೊಳ್ಳುತ್ತಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಪ್ರಮುಖ 10 ಪಾಯಿಂಟ್
ಸೋಷಿಯಲ್ ಮೀಡಿಯಾದಲ್ಲಿ ಉಗ್ರ ನರಸಿಂಹ
ಸಾಮಾಜಿಕ ಜಾಲತಾಣದಲ್ಲಿಯು ಉಗ್ರ ನರಸಿಂಹ ಮಹಾದ್ವಾರದ ಫೋಟೊ, ವಿಡಿಯೋಗಳು ವೈರಲ್ ಆಗಿವೆ. ಮಹಾದ್ವಾರದ ಡ್ರೋಣ್ ವಿಡಿಯೋಗೆ ಉಗ್ರಂ ಸಿನಿಮಾದ ಹಾಡುಗಳನ್ನು ಹಾಕಿ ರೀಲ್ಸ್ ಮಾಡಲಾಗಿದೆ. ಈ ವಿಡಿಯೋ ಹೆಚ್ಚು ಜನಪ್ರಿಯತೆ ಪಡೆದಿದೆ. ಹಲವರ ವಾಟ್ಸಪ್ ಸ್ಟೇಟಸ್, ಫೇಸ್‌ಬುಕ್, ಇನ್‌ಸ್ಟಾಗ್ರಾಂನಲ್ಲು ಈ ವಿಡಿಯೋ ಅಬ್ಬರಿಸುತ್ತಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422