ಶಿವಮೊಗ್ಗದಲ್ಲಿ ಎಫ್‌.ಎಂ ರೇಡಿಯೋ 10 ಕೆ.ವಿ. ಟ್ರಾನ್ಸ್‌ಮೀಟರ್‌, ಉದ್ಘಾಟನೆಗೆ ಬರ್ತಿದ್ದಾರೆ ಸೆಂಟ್ರಲ್‌ ಮಿನಿಸ್ಟರ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಇಲ್ಲಿನ ಆಕಾಶವಾಣಿ ಭದ್ರಾವತಿ ಕೇಂದ್ರ 10 ಕಿಲೋ ವಾಟ್ ಸಾಮರ್ಥ್ಯದ ಎಫ್.ಎಂ 101.4 ತರಂಗಾಂತರದ (FM transmitter) ಮೂಲಕ ಶಿವಮೊಗ್ಗದ ಸುತ್ತಲಿನ ಎಂಟು ಜಿಲ್ಲೆಗಳಿಗೆ ಪ್ರಸಾರ ವ್ಯಾಪ್ತಿ ಹೆಚ್ಚಿಸಿಕೊಳ್ಳುತ್ತಿದೆ.

ಅದಕ್ಕೆ ಪೂರಕವಾಗಿ ಶಿವಮೊಗ್ಗದ ವಿದ್ಯಾನಗರದಲ್ಲಿ 10 ಕಿಲೋ ವ್ಯಾಟ್ ಸಾಮರ್ಥ್ಯದ ಟ್ರಾನ್ಸ್‌ಮೀಟರ್‌ ಉದ್ಘಾಟನೆಯನ್ನು ಫೆ. 26ರಂದು ಮಧ್ಯಾಹ್ನ 12.30ಕ್ಕೆ ಕೇಂದ್ರದ ಮಾಹಿತಿ ಹಾಗೂ ಪ್ರಸಾರ ಮತ್ತು ಸಂಸದೀಯ ವ್ಯವಹಾರಗಳ ಖಾತೆಯ ರಾಜ್ಯ ಸಚಿವ ಎಲ್.ಮುರುಗನ್ ನೆರವೇರಿಸಲಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಪ್ರಸಾರ ಭಾರತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೌರವ್ ದ್ವಿವೇದಿ ಸೇರಿ ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

BY-Raghavendra-about-FM-Tower-on-Shimoga-Tv-tower

ವಿಮಾನದಲ್ಲಿ ಶಿವಮೊಗ್ಗಕ್ಕೆ ಮಿನಿಸ್ಟರ್‌

ಕೇಂದ್ರ ಮಾಹಿತಿ ಮತ್ತು ಪ್ರಸಾರ ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಎಲ್. ಮುರುಗನ್ ಅವರು ಇಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12:30 ರಿಂದ 2 ಗಂಟೆಯವರೆಗೆ ಶಿವಮೊಗ್ಗದ ಆಕಾಶವಾಣಿ ಕೇಂದ್ರದಲ್ಲಿ ಹತ್ತು ಕಿಲೋ ವ್ಯಾಟ್ (10KW) ಟ್ರಾನ್ಸ್‌ಮಿಟರ್ ಉದ್ಘಾಟನಾ ಸಮಾರಂಭದಲ್ಲಿ ಅವರು ಭಾಗವಹಿಸಲಿದ್ದಾರೆ. ಮಧ್ಯಾಹ್ನ 2:15ಕ್ಕೆ ಮಲೆನಾಡು ಶೈರ್ ತಲುಪಲಿದ್ದಾರೆ. ಸಂಜೆ 4:45ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ SG-2924 ವಿಮಾನದ ಮೂಲಕ ಚೆನ್ನೈಗೆ ಪ್ರಯಾಣಿಸಲಿದ್ದಾರೆ.

ಇದನ್ನೂ ಓದಿ – ಊರುಗಡೂರಿನ ಸಂಕೇತ್‌ ಮನೆಗೆ ಸಂಸದ ರಾಘವೇಂದ್ರ ಭೇಟಿ, ಒಂದು ಲಕ್ಷ ರುಪಾಯಿ ನೆರವು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment