ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ನವೆಂಬರ್ 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ ರೈಲ್ವೆ ನಿಲ್ದಾಣ ಮುಂಭಾಗ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಇವತ್ತು ಬೆಳಗ್ಗೆ ಮೃತದೇಹ ಪತ್ತೆಯಾಗಿದೆ.

ನವೆಂಬರ್ 24 ರಂದು ಶಿವಮೊಗ್ಗ ರೈಲು ನಿಲ್ದಾಣದ ಕಟ್ಟಡದ ಮುಂಭಾಗದಲ್ಲಿ ಸುಮಾರು 55 ರಿಂದ 60 ವಯಸ್ಸಿನ ಅಪರಿಚಿತ ಗಂಡಸು ಮೃತಪಟ್ಟಿದ್ದು, ಮೃತ ದೇಹವನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ಶೈತ್ಯಾಗಾರದಲ್ಲಿ ಇರಿಸಲಾಗಿದೆ.
ಅಪರಿಚಿತ ಪುರುಷ ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ, ಎತ್ತರ ಸುಮಾರು 5.4 ಅಡಿ, ತಲೆಯಲ್ಲಿ ಸುಮಾರು 02 ಇಂಚು ಉದ್ದದ ಬಿಳಿ ಮತ್ತು ಕಪ್ಪು ಕೂದಲು, ಸುಮಾರು 1 ಇಂಚು ಬಿಳಿ ಗಡ್ಡ ಮೀಸೆ ಬಿಟ್ಟಿರುತ್ತಾರೆ. ಬಲಗೈಯಲ್ಲಿ ತೆಲುಗು ಭಾಷೆಯಲ್ಲಿ 4 ಅಕ್ಷರದ ಹೆಸರಿನ ಹಚ್ಚೆ ಗುರುತಿದ್ದು ಸ್ಪಷ್ಟವಾಗಿ ಕಾಣುತ್ತಿರುವುದಿಲ್ಲ.
ಒಂದು ಬಿಳಿ ಬಣ್ಣದ ತುಂಬು ತೋಳಿನ ಶರ್ಟ್, ನೀಲಿ ಮತ್ತು ಕಪ್ಪು ಬಿಳಿ ಕೆಂಪು ಗೆರೆಯುಳ್ಳ ಅಡ್ಡ ಮತ್ತು ಉದ್ದ ಪಟ್ಟೆಯುಳ್ಳ ಪಂಚೆ, ಬಿಳಿ ಹಸಿರು ಬಣ್ಣದ ಅಡ್ಡ, ಉದ್ದ ಗೆರೆಯುಳ್ಳ ಟವೆಲ್, ನೀಲಿ ಬಣ್ಣದ ಯೂಸ್ ಅಂಡ್ ತ್ರೋ ಮಾಸ್ಕ್, ಒಂದು ಜೊತೆ ಬ್ರೌನ್ ಕಲರ್ ನ ಚಪ್ಪಲಿಗಳನ್ನು ಧರಿಸಿದ್ದಾರೆ.
ವಾರಸುದಾರರು ಯಾರಾದರೂ ಇದ್ದಲ್ಲಿ ಶಿವಮೊಗ್ಗ ರೈಲ್ವೆ ಪೊಲೀಸ್ ಸಬ್-ಇನ್ಸಪೆಕ್ಟರ್, ದೂರವಾಣಿ ಸಂಖ್ಯೆ: 08182-22974, ಮೊ.ಸಂ: 94808-02124ನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ರೈಲ್ವೇ ಪೊಲೀಸ್ ಠಾಣೆಯ ಪ್ರಕಟಣೆ ತಿಳಿಸಿದೆ.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






