ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | BANGALORE NEWS | 19 JUNE 2021
ಕರೋನ ಪ್ರಕರಣಗಳು ಕಡಿಮೆಯಾದ ಹಿನ್ನೆಲೆ ರಾಜ್ಯ ಸರ್ಕಾರ ಹೊಸ ಸಡಿಲಿಕೆ ನಿಯಮಗಳನ್ನು ಜಾರಿಗೊಳಿಸಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೊಸ ಸಡಿಲಿಕೆ ನಿಯಮಗಳನ್ನು ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.
ಯಾವ್ಯಾವ ಜಿಲ್ಲೆಯಲ್ಲಿ ಹೇಗಿರುತ್ತೆ ಅನ್ಲಾಕ್?
16 ಜಿಲ್ಲೆಗಳಲ್ಲಿ ಶೇ.5ಕ್ಕಿಂತಲೂ ಕಡಿಮೆ ಪಾಸಿಟಿವ್ ಇದ್ದು. 13 ಜಿಲ್ಲೆಯಲ್ಲಿ ಶೇ.5 ರಿಂದ ಶೇ.10ರಷ್ಟು ಪಾಸಿಟಿವ್ ಇದೆ. ಮೈಸೂರು ಜಿಲ್ಲೆಯಲ್ಲಿ ಶೇ.10ಕ್ಕಿಂತಲೂ ಹೆಚ್ಚು ಪಾಸಿಟಿವಿಟಿ ದರ ಇದೆ.
ಪಾಸಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧ ಸಡಿಲಿಕೆ ಮಾಡುವಂತೆ ತಾಂತ್ರಿಕ ಸಲಹಾ ಸಮಿತಿ ಮತ್ತು ಸಂಪುಟ ಸಚಿವರು ತೀರ್ಮಾನಿಸಿದ್ದಾರೆ.
ಶೇ.5ಕ್ಕಿಂತಲೂ ಕಡಿಮೆ ಇರುವ ಜಿಲ್ಲೆಗಳು
ಶೇ.5ಕ್ಕಿಂತಲೂ ಕಡಿಮೆ ಪಾಸಿಟಿವಿಟಿ ದರ ರುವ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ, ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ಯಾದಗಿರಿ, ರಾಮನಗರ, ಬೀದರ್ ಜಿಲ್ಲೆಗಳಿಗೆ ಪ್ರತ್ಯೇಕ ಸಡಿಲಿಕೆ.
ಎಲ್ಲಾ ಅಂಗಡಿಗಳು ಬೆಳಗ್ಗೆಯಿಂದ ಸಂಜೆ 5 ಗಂಟೆಗೆವರೆಗೆ ತೆಗೆಯಲು ಅನುವು. ಎಸಿ ಚಾಲನೆ ಇಲ್ಲದೆ ಹೊಟೇಲ್, ಕ್ಲಬ್, ರೆಸ್ಟೋರೆಂಟ್ ತೆಗೆಯಲು ಅವಕಾಶ. ಮದ್ಯಪಾನಕ್ಕೆ ಇಲ್ಲಿ ಅವಕಾಶವಿಲ್ಲ. ಕುಳಿತು ಊಟ, ತಿಂಡಿ ಮಾಡಲು ಅವಕಾಶವಿದೆ. ಶೇ.50ರಷ್ಟು ಸಾಮರ್ಥ್ಯವಿರಬೇಕು.
ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶವಿದೆ. ಬಸ್ಸು, ಮೆಟ್ರೋದಲ್ಲಿ ಶೇ.50ರಷ್ಟು ಸಾಮರ್ಥ್ಯದೊಂದಿಗೆ ಸಂಚರಿಸಲು ಅವಕಾಶ.
ಹೊರಾಂಗಣ ಕ್ರೀಡೆಗಳಿಗೆ ವೀಕ್ಷಕರಿಲ್ಲದೆ ಅನುಮತಿ. ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಶೇ.50 ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಣೆ. ಲಾಡ್ಜ್ಗಳಲ್ಲಿ, ರೆಸಾರ್ಟ್, ಜಿಮ್ ಶೇ.50 ಸಾಮರ್ಥ್ಯದಲ್ಲಿ ಅವಕಾಶ.
ಶೇ.5ಕ್ಕಿಂತಲೂ ಹೆಚ್ಚಿರುವ ಜಿಲ್ಲೆಗಳು
ಶೇ.5ಕ್ಕಿಂತಲೂ ಹೆಚ್ಚು ಪಾಸಿಟಿವ್ ದರ ಇರುವ ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ, ವಿಜಯಪುರ ಜಿಲ್ಲೆಗಳಿಗೆ ಪ್ರತ್ಯೇಕ ನಿರ್ಬಂಧ ಜಾರಿಯಲ್ಲಿ ಇರಲಿದೆ.
ಜೂನ್ 11ರಂದು ವಿಧಿಸಲಾಗಿರುವ ಆದೇಶದ ಅನ್ವಯ ನೀಡಲಾಗಲಿರುವ ಸಡಿಲಿಕೆ ಮಾತ್ರ ಅನ್ವಯವಾಗಲಿದೆ. (ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಸಡಿಲಿಕೆ ಇರಲಿದೆ. ಅಗತ್ಯ ವಸ್ತುಗಳ ಖರೀದಿಗೆ ಅವಕಾಶ)
ಶೇ.10ಕ್ಕಿಂತಲೂ ಹೆಚ್ಚು ಪಾಸಿಟಿವಿಟಿ ದರ ಇರುವ ಮೈಸೂರು ಜಿಲ್ಲೆಯಲ್ಲಿ ಈಗಿರುವ ನಿಬಂಧನೆಗಳು ಮುಂದುವರೆಯಲಿದೆ.
ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ
ರಾಜ್ಯವ್ಯಾಪಿ ಅನ್ವಯವಾಗುವಂತೆ ಪ್ರತಿ ನಿತ್ಯ ನೈಟ್ ಕರ್ಫ್ಯೂ ಇರಲಿದೆ. ರಾತ್ರಿ 7 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೂ ಇರಲಿದೆ. ವಾರಾಂತ್ಯದ ಕರ್ಫ್ಯೂ ಇರಲಿದೆ. ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಜಾರಿಯಲ್ಲಿರಲಿದೆ.
ಶೇ.50ರಷ್ಟು ಪ್ರಯಾಣಿಕರಿಗೆ ಮಿತಿಗೊಳಿಸಿ ಬಸ್ ಸಂಚಾರ ಪುನಾರಂಭ ಮಾಡಲಾಗುತ್ತಿದೆ.
ಈಜು ಕೊಳ, ಸಭೆ, ಸಮಾರಂಭ, ರಾಜಕೀಯ ಕಾರಯ್ಕ್ರಮ, ಪೂಜಾ ಸ್ಥಳ, ಶಿಕ್ಷಣ ಸಂಸ್ತೆಗಳು, ಸಿನಿಮಾ ಮಂದಿರ, ಶಾಪಿಂಗ್ ಮಾಲ್, ಹವಾ ನಿಯಂತ್ರಿತ ಶಾಪಿಂಗ್ ಕಾಂಪ್ಲೆಕ್ಸ್ಗಳು, ಅಮ್ಯೂಸ್ಮೆಂಟ್ ಪಾರ್ಕ್, ಪಬ್ಗಳನ್ನು ನಿರ್ಬಂಧಿಸಲಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422