ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಶಿವಮೊಗ್ಗ ಲೈವ್.ಕಾಂ | SHIMOGA NEWS | 04 ಅಕ್ಟೋಬರ್ 2021
ಶಿವಮೊಗ್ಗ ನಗರದ ಕೆಲವು ಕಡೆ ಅನಿಯಮಿತವಾಗಿ ವಿದ್ಯುತ್ ಕಡಿತಗೊಳಿಸಲಾಗುತ್ತಿದೆ. ಇದಕ್ಕೆ ತಡೆಯೊಡ್ಡಬೇಕು ಎಂದು ಆಗ್ರಹಿಸಿ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ ನೇತೃತ್ವದಲ್ಲಿ ಮೆಸ್ಕಾಂ ಮುಖ್ಯ ಕಾರ್ಯನಿರ್ವಾಹಕ ಎಂಜಿನಿಯರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಕೆಲವು ದಿನಗಳಿಂದ ವಿದ್ಯಾನಗರ, ಎಂ.ಆರ್.ಎಸ್, ಚಿಕ್ಕಲ್, ಸಿದ್ಧೇಶ್ವರ ನಗರ, ಗುರುಪುರ, ಪುರಲೆ, ಮಲವಗೊಪ್ಪ ಸೇರಿದಂತೆ ಸುತ್ತಮುತ್ತ ಪ್ರದೇಶದಲ್ಲಿ ಪದೇ ಪದೇ ವಿದ್ಯುತ್ ಕಡಿತಗೊಳಿಸಲಾಗುತ್ತಿದೆ.
ಪೂರ್ವ ಮಾಹಿತಿ ನೀಡದೆ ವಿದ್ಯುತ್ ಕಡಿತ ಮಾಡುತ್ತಿರುವುದರಿಂದ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಕೆಲವೊಮ್ಮೆ ದಿನಪೂರ್ತಿ ವಿದ್ಯುತ್ ಇರುವುದಿಲ್ಲ. ಕೆಲವೊಮ್ಮೆ ರಾತ್ರಿ ಪೂರ್ತಿ ವಿದ್ಯುತ್ ಇಲ್ಲದೇ ಸಾರ್ವಜನಿಕರು ತೊಂದರೆಗೀಡಾಗಿದ್ದಾರೆ.

ಇನ್ಮುಂದೆ ಇಂತಹ ಸಮಸ್ಯೆಯಾಗದಂತೆ ಮೆಸ್ಕಾಂ ನೋಡಿಕೊಳ್ಳಬೇಕು ಎಂದು ಯಮುನಾ ರಂಗೇಗೌಡ ಆಗ್ರಹಿಸಿದರು. ಪಾಲಿಕೆ ಸದಸ್ಯೆ ಮೆಹಕ್ ಷರೀಫ್, ರಂಗೇಗೌಡ, ಪವನ್, ಶಿವಣ್ಣ, ಮೋಹನ್, ಲಿಂಗರಾಜ್, ರಾಜು ಸೇರಿದಂತೆ ಹಲವರು ಈ ಸಂದರ್ಭ ಇದ್ದರು.


(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200






