ಶಿವಮೊಗ್ಗ : ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಮಾರ್ಚ್ 18ರಿಂದ 21ರವರೆಗೆ ಶಿವಮೊಗ್ಗ ನಗರಕ್ಕೆ ಭೇಟಿ (Tour) ನೀಡುತ್ತಿದ್ದಾರೆ. ಈ ಸಂದರ್ಭ ಸಾರ್ವಜನಿಕರಿಂದ ಅಹವಾಲು ಸ್ವೀಕಾರಿ, ವಿವಿಧ ಸಭೆ-ಸಮಾರಂಭ, ತರಬೇತಿ ಕಾರ್ಯಾಗಾರ, ಸಮಾಲೋಚನಾ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.
ಯಾವ್ಯಾವ ದಿನ ಏನೆಲ್ಲ ಕಾರ್ಯಕ್ರಮ?
ಮಾರ್ಚ್18ರಂದು ಸಂಜೆ 7.40ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು.
ಮಾರ್ಚ್19ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಅಂದು ಸಂಜೆ 5.30ರಿಂದ 6.30ರವರೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಶಿಕ್ಷಣ ಇಲಾಖೆ, ರೇಷ್ಮೆ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗಾಗಿ ಹಾಗೂ ನ್ಯಾಯಾಂಗ ಇಲಾಖೆಯ ಅಧಿಕಾರಿ-ಸಿಬ್ಬಂದಿಗಾಗಿ ಆಯೋಜಿಸಿರುವ ಕಾನೂನು ಸಾಕ್ಷರತಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಮಾರ್ಚ್20ರಂದು ಬೆಳಿಗ್ಗೆ 9.45 ರಿಂದ 10.45ರವರೆಗೆ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಭವನಕ್ಕೆ ಭೇಟಿ ನೀಡಲಿದ್ದಾರೆ. ಹಿರಿಯ ವಕೀಲರು ಹಾಗೂ ವಕೀಲರ ಸಂಘದ ಪದಾಧಿಕಾರಿಗಳ ಜೊತೆ ಸಾರ್ವಜನಿಕರಿಗೆ ಉತ್ತಮ ಸೇವೆ ಮತ್ತು ಆಡಳಿತ ನೀಡುವಲ್ಲಿ ವಕೀಲರ ಪಾತ್ರ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸುವರು. ಬೆಳಿಗ್ಗೆ 11ರಿಂದ 11.30ರವರೆಗೆ ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಬಾಕಿ ಇರುವ ಸಮಸ್ಯೆಗಳನ್ನು ಪರಿಹರಿಸುವ ಕುರಿತು ದೂರುದಾರರು ಮತ್ತು ಪ್ರತಿವಾದಿಗಳನ್ನು ಉದ್ದೇಶಿಸಿ ಮಾತನಾಡುವರು. ಅಲ್ಲದೇ ಸಾರ್ವಜನಿಕರು ಸಲ್ಲಿಸಿದ ದೂರುಗಳು ಮತ್ತು ಕುಂದು-ಕೊರತೆಗಳ ಪರಿಹಾರಕ್ಕಾಗಿ ಕೈಗೊಳ್ಳಲಿದ್ದಾರೆ.
ಮಾರ್ಚ್21ರಂದು ಬೆಳಿಗ್ಗೆ 9ರಿಂದ 10ರವರೆಗೆ ಪ್ರವಾಸಿ ಮಂದಿರದಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಬೆಳಿಗ್ಗೆ 10.30ರಿಂದ ಸಂಜೆ 5ರವರೆಗೆ ಜಿಲ್ಲೆಯ ಶಿವಮೊಗ್ಗ ನಗರ ಮತ್ತು ತಾಲೂಕು ಕೇಂದ್ರಗಳಲ್ಲಿನ ಸರ್ಕಾರಿ ಕಚೇರಿಗಳು ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸುವರು.
ಸಂಜೆ 6 ರಿಂದ 7ರವರೆಗೆ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಸಾರ್ವಜನಿಕ ಆಡಳಿತದಲ್ಲಿ ಲೋಕಾಯುಕ್ತ ಮತ್ತು ಕಾನೂನು ಸೇವಾ ಪ್ರಾಧಿಕಾರಗಳ ಪಾತ್ರ ಎಂಬ ವಿಷಯದ ಕುರಿತು ನ್ಯಾಯಾಧೀಶರೊಂದಿಗೆ ಸಂವಾದ ನಡೆಸುವರು. ಅಂದು ರಾತ್ರಿ 11ಕ್ಕೆ ಶಿವಮೊಗ್ಗದಿಂದ ಬೆಂಗಳೂರಿಗೆ ಹಿಂದಿರುಗುವರು.
ಇದನ್ನೂ ಓದಿ » ಅಪಘಾತ ತಪ್ಪಿಸಲು ರಸ್ತೆ ಕ್ಲೀನ್ ಮಾಡಿದ ಶಿವಮೊಗ್ಗದ ಸಂಚಾರ ಪೊಲೀಸರು, ಆಗಿದ್ದೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200