ಶಿವಮೊಗ್ಗ : ಉಪ ಲೋಕಾಯುಕ್ತ ನ್ಯಾ. ಕೆ.ಎನ್.ಫಣೀಂದ್ರ ಮಾ.18 ರಿಂದ 21ರವರೆಗೆ ಶಿವಮೊಗ್ಗ ಸಿಟಿ ಪ್ರವಾಸ (Tour) ಕೈಗೊಂಡಿದ್ದಾರೆ. ಈ ಅವಧಿಯಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು. ವಿವಿಧ ಸಭೆ, ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿವಿಧೆಡೆ ದಿಢೀರ್ ಭೇಟಿಯನ್ನೂ ನೀಡಲಿದ್ದಾರೆ.
ಮಾ.19ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5ರವರೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು.
ಜಿಲ್ಲೆಯಲ್ಲಿ ಯಾವುದೇ ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿ ಅಥವಾ ನೌಕರರಿಂದ ಕಾನೂನು ರೀತ್ಯಾ ಆಗಬೇಕಾದ ಕೆಲಸದಲ್ಲಿ ವಿಳಂಬವಾಗಿದ್ದಲ್ಲಿ, ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆಕೊಡುವುದು, ಇನ್ಯಾವುದೇ ದುರಾಡಳಿತದಲ್ಲಿ ತೊಡಗಿದ್ದರೆ ದೂರು ಸಲ್ಲಿಸಬಹುದಾಗಿದೆ. ತೊಂದರೆಗೊಳಗಾದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಅರ್ಜಿ ನಮೂನೆ 1 ಮತ್ತು 2 ರಲ್ಲಿ ಲಿಖಿತವಾಗಿ ದಾಖಲೆ, ಸಾಕ್ಷಿ ಸಹಿತ ಸಲ್ಲಿಸಬಹುದಾಗಿದೆ.

ಮಾ.20 ರಂದು ಬೆಳಿಗ್ಗೆ 11 ರಿಂದ 11.30 ರವರೆಗೆ ಜಿಲ್ಲಾ ಪಂಚಾಯಿತಿಯ ನಜೀರ್ ಸಾಬ್ ಸಭಾಂಗಣದಲ್ಲಿ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಪರಿಹರಿಸುವ ಕುರಿತು ದೂರುದಾರರು ಮತ್ತು ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತ್ಯಾ ವಿಚಾರಣೆ ನಡೆಸುತ್ತಾರೆ ಎಂದು ಶಿವಮೊಗ್ಗ ಲೋಕಾಯುಕ್ತ ಇಲಾಖೆಯ ಪೊಲೀಸ್ ಅಧೀಕ್ಷಕ ಮಂಜುನಾಥ ಚೌದರಿ. ಎಂ.ಹೆಚ್. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಇದನ್ನೂ ಓದಿ » ಸೊರಬದ ವ್ಯಕ್ತಿಗೆ 4 ವರ್ಷ ಜೈಲು ಶಿಕ್ಷೆ ಪ್ರಕಟಿಸಿದ ಶಿವಮೊಗ್ಗ ಕೋರ್ಟ್, ಕಾರಣವೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200