ಶಿವಮೊಗ್ಗ : ನಗರದ ಕಮಲಾ ನೆಹರು ಮಹಿಳಾ ಕಾಲೇಜು ಪಕ್ಕದಲ್ಲಿ ಮಹಾನಗರ ಪಾಲಿಕೆಗೆ ಸೇರಿದ ಜಾಗಕ್ಕೆ ಶುಕ್ರವಾರ ಭೇಟಿ (VISIT) ನೀಡಿದ ಉಪಲೋಕಾಯುಕ್ತ ನ್ಯಾ.ಫಣೀಂದ್ರ ಅಲ್ಲಿನ ಅವ್ಯವಸ್ಥೆ ಸರಿಪಡಿಸುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ಕಾಲೇಜಿಗೆ ಹೊಂದಿಕೊಂಡಿರುವ ಈ ಖಾಲಿ ಜಾಗದಲ್ಲಿ ತ್ಯಾಜ್ಯ, ಒಡೆದ ಮದ್ಯದ ಬಾಟಲಿಗಳು ತುಂಬಿದ್ದವು. ಇದರಿಂದ ಕಾಲೇಜು ವಿದ್ಯಾರ್ಥಿಗಳು ಸಮಸ್ಯೆ ಅನುಭವಿಸುತ್ತಿದ್ದರು. ವಿದ್ಯಾರ್ಥಿನಿಯರ ಸುರಕ್ಷತೆಯ ಬಗ್ಗೆ ಹಲವು ದೂರುಗಳನ್ನು ಸಲ್ಲಿಸಲಾಗಿತ್ತು.
ಈ ಹಿನ್ನೆಲೆ ಉಪಲೋಕಾಯುಕ್ತರು ಭೇಟಿ ನೀಡಿದರು. ತ್ಯಾಜ್ಯ, ಮದ್ಯದ ಬಾಟಲಿ ಕಂಡು ಅಸಮಾಧಾನ ವ್ಯಕ್ತಪಡಿಸಿದರು. ಸ್ಥಳದಲ್ಲಿ ಹಾಜರಿದ್ದ ಪಾಲಿಕೆ ಆಯುಕ್ತರ ಜತೆ ಚರ್ಚಿಸಿ, ಜಾಗದ ಸುತ್ತ ತಡೆಗೋಡೆ ನಿರ್ಮಿಸಿ, ಸ್ಬಚ್ಛತೆ ನಿರ್ವಹಿಸಬೇಕು ಎಂದು ಸೂಚಿಸಿದರು.
ಒಂದು ತಿಂಗಳ ಒಳಗೆ ಸದರಿ ಜಾಗವನ್ನು ಸಂಪೂರ್ಣ ಅಭಿವೃದ್ಧಿ ಪಡಿಸಲಾಗುವುದು ಎಂದು ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್ ತಿಳಿಸಿದರು.
ಎನ್ಇಎಸ್ ನಿರ್ದೇಶಕ ಎಂ.ಆರ್.ಅನಂತದತ್ತ, ಕುಲಸಚಿವ ಪ್ರೊ.ಎನ್.ಕೆ.ಹರಿಯಪ್ಪ, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ, ಪ್ರಾಂಶುಪಾಲ ಡಾ.ಆರ್.ಎಂ.ಜಗದೀಶ್, ಪಿ.ಆರ್.ಓ ಸಿ.ಎಂ.ನೃಪತುಂಗ ಮತ್ತಿತರರಿದ್ದರು.
ಉಪಲೋಕಾಯುಕ್ತರು ಭೇಟಿ ನೀಡಿದ ಕೆಲವೇ ನಿಮಿಷಗಳಲ್ಲಿ ಪಾಲಿಕೆಯ ಸಿಬ್ಬಂದಿ ಜಾಗದ ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದರು.

ಇದನ್ನೂ ಓದಿ – ಲಕ್ಷ ಲಕ್ಷ ಮೌಲ್ಯದ ಮಾಂಗಲ್ಯ ಸರ ಖರೀದಿಸಿ ಮನೆಗೆ ಹೋಗಿ ನೋಡಿದಾಗ ಕಾದಿತ್ತು ಆಘಾತ, ಆಗಿದ್ದೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200