ರಾಜ್ಯ ಸರ್ಕಾರ, ವಿರೋಧ ಪಕ್ಷಗಳ ವೈಫಲ್ಯಕ್ಕೆ ಆಕ್ರೋಶ, ಶಿವಮೊಗ್ಗ ಡಿಸಿ ಮೂಲಕ ರಾಜ್ಯಪಾಲರಿಗೆ ದೂರು, ಕಾರಣವೇನು?

ಶಿವಮೊಗ್ಗ: ಸಂವಿಧಾನದ 73 ಮತ್ತು 74ನೇ ತಿದ್ದುಪಡಿ ಕಾಯ್ದೆಯ ಆಶಯದಂತೆ ಸ್ಥಳೀಯ ಸಂಸ್ಥೆಗಳ ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಯನ್ನು ರಕ್ಷಿಸಲು ಹಾಗೂ ಸಕಾಲದಲ್ಲಿ ಚುನಾವಣೆ ನಡೆಸದ ಸರ್ಕಾರದ ಕ್ರಮವನ್ನು ವಿರೋಧಿಸಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ದೂರು ಸಲ್ಲಿಸಿದೆ.

ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ವೇದಿಕೆ ಕಾರ್ಯಕರ್ತರು, ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.  

Protest-for-local-body-elections.

ಡಿಮಾಂಡ್‌ಗಳು ಏನೇನು?

  • ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತವೆ. ಆದರೆ ರಾಜ್ಯ ಸರ್ಕಾರವು ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸದೆ ಅಧಿಕಾರ ವಿಕೇಂದ್ರೀಕರಣ ನಿಯಮಗಳನ್ನು ಉಲ್ಲಂಘಿಸುತ್ತಿದೆ.
  • ಚುನಾವಣೆಯನ್ನು ಸಮಯಕ್ಕೆ ಸರಿಯಾಗಿ ನಡೆಸದಿರುವುದು ಮತ್ತು ಆಡಳಿತಾತ್ಮಕ ಹಸ್ತಕ್ಷೇಪ ಮಾಡುತ್ತಿರುವುದು ಸಂವಿಧಾನದ ಮೂಲ ಸಿದ್ಧಾಂತಕ್ಕೆ ಮತ್ತು ಪ್ರಜಾಪ್ರಭುತ್ವಕ್ಕೆ ವಿರೋಧವಾಗಿದೆ.
  • ಈ ಗಂಭೀರ ವಿಷಯದ ಬಗ್ಗೆ ಧ್ವನಿ ಎತ್ತದ ವಿರೋಧ ಪಕ್ಷಗಳ ವೈಫಲ್ಯದ ಬಗ್ಗೆಯೂ ವೇದಿಕೆಯು ತನ್ನ ಅಸಮಾಧಾನ ವ್ಯಕ್ತಪಡಿಸಿದೆ.

ರಾಜ್ಯಪಾಲರು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಕೂಡಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ಅಧಿಕಾರ ವಿಕೇಂದ್ರೀಕರಣವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ವೇದಿಕೆಯ ಜಿಲ್ಲಾಧ್ಯಕ್ಷರಾದ ಮೂರ್ತಿ ಸಿ. ಅವರು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Shivamogga-Live-Number-1-Promotion
Shivamogga-Live-Number-1-Promotion