ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ಬಿಪಿಎಲ್ ಕಾರ್ಡ್ (BPL Card) ಪಡೆಯಲು ಈಗಾಗಲೇ ಸಲ್ಲಿಕೆಯಾದ ಅರ್ಜಿಗಳ ಪರಿಷ್ಕರಣೆ ಮಾಡಿಸಿ ಕೂಡಲೇ ಹೊಸ ಕಾರ್ಡ್ ವಿತರಿಸುವಂತೆ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ಅಧ್ಯಕ್ಷ ಕಲ್ಲೂರು ಮೇಘರಾಜ್ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.
ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಲ್ಲೂರು ಮೇಘರಾಜ್, ಹೊಸ ಬಿಪಿಎಲ್ ಕಾರ್ಡ್ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಬೇಕು. ಬಿಪಿಎಲ್ ಕುಟುಂಬಗಳಿಗೆ ರಾಜ್ಯದ ಎಲ್ಲಾ ಸಾರ್ವಜನಿಕ ಆಸ್ಪತ್ರೆಗಳಿಗೆ ಸಿಟಿ ಸ್ಕ್ಯಾನ್, ಎಂಆರ್ಐ ಸ್ಕ್ಯಾನ್, ಅಲ್ಟ್ರಾಸೌಂಡ್ ಹಾಗೂ ಅಂಗಾಂಗ ಕಸಿ ಸೌಲಭ್ಯಗಳನ್ನು ಉಚಿತವಾಗಿ ಒದಗಿಸುವುದಾಗಿ 2025ರ ಜನವರಿಯಲ್ಲಿ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನಿಸಿತ್ತು. ಈವರೆಗೂ ಸರ್ಕಾರ ಆದೇಶ ಹೊರಡಿಸಿಲ್ಲ ಎಂದರು.
ಆರೋಗ್ಯ ಸೌಲಭ್ಯ ಪಡೆಯಲು ಸಾರ್ವಜನಿಕರಿಗೆ ನೆರವಾಗಲು ಸರ್ಕಾರ ಕೂಡಲೇ ಸಲ್ಲಿಕೆಯಾದ ಬಿಪಿಎಲ್ ಕಾರ್ಡುಗಳ ಅರ್ಜಿ ಪರಿಷ್ಕರಣೆ ಮಾಡಿಸಿ ಹೊಸಕಾರ್ಡ್ ವಿತರಿಸಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಎಚ್.ಎಂ. ಸಂಗಯ್ಯ, ಜನಮೇಜಿರಾವ್, ಎಂ.ಎ. ಜೀವನ್ಗೌಡ, ಕೋಡ್ಲು ಶ್ರೀಧರ್, ಶಂಕ್ರಾನಾಯ್ಕ, ಶಿವಣ್ಣ, ಎಲ್. ಆದಿಶೇಷ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ತುಸು ಹೆಚ್ಚಲಿದೆ ತಾಪಮಾನ, ಇವತ್ತೂ ಸುರಿಯುತ್ತಾ ಮಳೆ? ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ಏನಿದೆ?
BPL Card
LATEST NEWS
- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

About The Editor
ನಿತಿನ್ ಆರ್.ಕೈದೊಟ್ಲು





