ಶಿವಮೊಗ್ಗ: ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರು ಅಕ್ಟೋಬರ್ 12ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ವಿವಿಧ ಕಾರ್ಯಕ್ರಮ ಹಾಗೂ ಜಿಲ್ಲೆಯ ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಚಿವರು ಅಕ್ಟೋಬರ್ 12ರ ಬೆಳಿಗ್ಗೆ 6.30ಕ್ಕೆ ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ವಿಶೇಷ ರೈಲಿನಲ್ಲಿ ಹೊರಟು ಬೆಳಿಗ್ಗೆ 10.30ಕ್ಕೆ ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ತಲುಪಲಿದ್ದಾರೆ. ಬಿ.ಹೆಚ್. ರಸ್ತೆಯಲ್ಲಿರುವ ಪಾರೇಖಾ ವಿನಾಯಕ ಮಾಲ್ನಲ್ಲಿ ಆಯೋಜಿಸಿರುವ ಬಿಎಸ್ಸಿ ಟೆಕ್ಸ್ಟೈಲ್ಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ.

ಬೆಳಿಗ್ಗೆ 11.30ಕ್ಕೆ ಸರ್ಕ್ಯೂಟ್ ಹೌಸ್ನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರೊಂದಿಗೆ ಜಿಲ್ಲೆಯ ರೈಲ್ವೆ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಮೈಸೂರು ವಿಭಾಗೀಯ ರೈಲ್ವೆ ಪ್ರಬಂಧಕರು, ದಕ್ಷಿಣ ಪಶ್ಚಿಮ ರೈಲ್ವೆಯ ನಿರ್ಮಾಣ ವಿಭಾಗದ ಮುಖ್ಯ ಆಡಳಿತಾಧಿಕಾರಿ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಸಭೆಯ ನಂತರ ಮಧ್ಯಾಹ್ನ 1.30ಕ್ಕೆ ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ವಿಶೇಷ ರೈಲಿನಲ್ಲಿ ಸಚಿವ ವಿ.ಸೋಮಣ್ಣ ಅವರು ನಿರ್ಗಮಿಸಲಿದ್ದಾರೆ.