ಶಿವಮೊಗ್ಗ ಲೈವ್.ಕಾಂ | SHIMOGA NEWS | 28 JUNE 2021
ಶಿವಮೊಗ್ಗ ಜಿಲ್ಲೆಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಲಸಿಕೆ ನೀಡಲಾಗುತ್ತದೆ. 16 ಸಾವಿರ ವಿದ್ಯಾರ್ಥಿಗಳಿಗೆ ಗುರುವಾರದಿಂದ ಲಸಿಕೆ ಹಾಕಲು ಉದ್ದೇಶಿಸಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು,
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗ ನಗರ ಹೊರತುಪಡಿಸಿ, ಗ್ರಾಮೀಣ ಮತ್ತು ಪಟ್ಟಣಗಳದ ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುತ್ತದೆ. 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುತ್ತದೆ ಎಂದು ತಿಳಿಸಿದರು.
ಲಿಸಿಕೆ ಉದ್ಘಾಟನೆಗೆ ಸಿಎಂ
ಸರ್ಕಾರಿ, ಅನುದಾನಿತ ಪ್ರಥಮ ದರ್ಜೆ, ಬಿ.ಎಡ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಲಾಗುವುದು. ಈ ಆಂದೋಲನ ಗುರುವಾರದಿಂದ ಮೂರು ದಿನಗಳ ಕಾಲ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವರ್ಚುಯಲ್ ವಿಡಿಯೋ ಮೂಲಕ ಉದ್ಘಾಟನೆ ಮಾಡಲಿದ್ದಾರೆ ಎಂದರು.
ಎಂಪಿಎಲ್ ಸ್ಪೋರ್ಟ್ಸ್ ಫೌಂಡೇಶನ್, ಸೇವಾ ಭಾರತಿ, ಪೆಸೆಟ್ ವಿದ್ಯಾಸಂಸ್ಥೆ, ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಈ ಕಾರ್ಯ ನಡೆಸಲಾಗುತ್ತಿದೆ ಎಂದು ರಾಘವೇಂದ್ರ ತಿಳಿಸಿದರು.
ಮಹಾನಗರಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪ, ಎಂ.ಪಿ.ಎಲ್ ಸಂಸ್ಥೆಯ ಮುಖ್ಯಸ್ಥ ಸುರೇಶ್ ವೈದ್ಯನಾಥನ್, ಜಗದೀಶ್ ರಾಜನ್, ಉಪಮೇಯರ್ ಗನ್ನಿಶಂಕರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಸುರಗೀಹಳ್ಳಿ, ನಾಗರಾಜ್, ವರ್ಗೀಸ್, ಯಾದವಕೃಷ್ಣ, ಗಿರೀಶ್ ಕಾರಂತ್, ಬಳ್ಳಕೆರೆ ಸಂತೋಷ್ ಸೇರಿದಂತೆ ಹಲವರು ಇದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200