ಶಿವಮೊಗ್ಗ ಲೈವ್.ಕಾಂ | SHIMOGA NEWS | 31 MAY 2021
ಶಿವಮೊಗ್ಗ ಮೆಡಿಕಲ್ ಕಾಲೇಜು ಸಿಬ್ಬಂದಿಗಳು ಲಸಿಕೆಗಾಗಿ ವಾರದ ರಜೆಯನ್ನೆ ತೊರೆದಿದ್ದಾರೆ. ಜನರಿಗೆ ಲಸಿಕೆ ನೀಡಬೇಕು ಎಂದು ಕಳೆದ ಐದು ತಿಂಗಳಿಂದ ಭಾನುವಾರವು ಕರ್ತವ್ಯ ನಿರ್ವಹಿಸುತ್ತಿದ್ದಾರೆ.
![]() |
ಮೇ 30ರಂದು ಭಾನುವಾರ ಸಿಬ್ಬಂದಿ ಕರ್ತವ್ಯ ನಿರ್ವಹಿಸಿ 480 ಮಂದಿಗೆ ಲಸಿಕೆ ನೀಡಿದ್ದಾರೆ. ಸರ್ಕಾರ ಒದಗಿಸಿದ್ದ 300 ಕೋವಿಶೀಲ್ಡ್ ಮತ್ತು 180 ಕೋವ್ಯಾಕ್ಸಿನ್ ಲಸಿಕೆ ನೀಡಲಾಗಿದೆ. ಎಲ್ಲವೂ ಸಕೆಂಡ್ ಡೋಸ್ ಲಸಿಕೆಯಾಗಿದೆ.
ಲಸಿಕೆಗಾಗಿ ನೋಡಲ್ ಅಧಿಕಾರಿಯಾಗಿರುವ ಸಿಮ್ಸ್ ಕಾಲೇಜಿನ ಡಾ.ಪ್ರವೀಣ್ ಕುಮಾರ್, ಒಬ್ಬರು ಅಸಿಸ್ಟೆಂಟ್ ಪ್ರೊಫೆಸರ್, ಇಬ್ಬರು ಮೆಡಿಕಲ್ ಸ್ನಾತಕೋತ್ತರ ವಿದ್ಯಾರ್ಥಿಗಳು, ನಾಲ್ವರು ಹೌಸ ಸರ್ಜನ್‍ಗಳು, ನಾಲ್ವರು ಡೇಟಾ ಎಂಟ್ರಿ ಆಪರೇಟರ್‍ಗಳು ವಾರದ ರಜೆಯನ್ನು ಕೈಬಿಟ್ಟು ಕೆಲಸ ಮಾಡುತ್ತಿದ್ದಾರೆ.
ಜನವರಿ 16ರಿಂದ ಲಸಿಕೆ ನೀಡುವ ಕಾರ್ಯ ಶುರುವಾಗಿದೆ. ಅಂದಿನಿಂದ ಭಾನುವಾರವು ಇಲ್ಲಿ ಲಸಿಕೆ ನೀಡಲಾಗುತ್ತಿದೆ.
ಲಕ್ಷಣ ಕಂಡು ಬಂದ ಕೂಡಲೆ ಪರೀಕ್ಷೆ ಮಾಡಿಸಿಕೊಳ್ಳಿ. ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಕೋವಿಡ್ ಪರೀಕ್ಷೆಗೆ ಫೋನ್ ಮಾಡಿ, ರಿಜಿಸ್ಟರ್ ಮಾಡಿಕೊಳ್ಳಿ
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200