ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಆಗಸ್ಟ್ 2020
ಅಯೋಧ್ಯೆಯಲ್ಲಿ ನಿರ್ಮಾಣ ಮಾಡುತ್ತಿರುವ ಶ್ರೀ ರಾಮಮಂದಿರದ ಜೊತೆಗೆ ಶ್ರೀ ಮಹರ್ಷಿ ವಾಲ್ಮೀಕಿಯವರ ಮಂದಿರವನ್ನೂ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ವಾಲ್ಮೀಕಿ ನಾಯಕರ ಯುವಪಡೆ ಕಾರ್ಯಕರ್ತರು ಒತ್ತಾಯಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಜನರ ಬಹುದಿನದ ಆಸೆಯಂತೆ ಶ್ರೀರಾಮಮಂದಿರ ನಿರ್ಮಾಣಕ್ಕೆ ಈಗಾಗಲೇ ಶಂಕುಸ್ಥಾಪನೆ ನೆರವೇರಿಸಿರುವುದು ಸ್ವಾಗತಾರ್ಹ. ಆದರೆ ಪ್ರಪಂಚಕ್ಕೆ ಶ್ರೀರಾಮನನ್ನು ಪರಿಚಯಿಸಿ ಜಗತ್ತಿಗೆ ರಾಮಾಯಣ ಮಹಾಕಾವ್ಯವನ್ನು ಕೊಡುಗೆಯಾಗಿ ಕೊಟ್ಟವರು ಮಹರ್ಷಿ ವಾಲ್ಮೀಕಿಯವರು. ಹೀಗಾಗಿ ಶ್ರೀರಾಮಮಂದಿರದ ಆವರಣದಲ್ಲಿಯೇ ಶ್ರೀ ಮಹರ್ಷಿ ವಾಲ್ಮೀಕಿಯವರ ಮಂದಿರವನ್ನೂ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]