ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 9 APRIL 2024
SHIMOGA : ಬೈಕ್ ಸವಾರನೊಬ್ಬ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್ ಕಸಿದುಕೊಂಡು ಪರಾರಿಯಾಗಿದ್ದಾನೆ. ಶಿವಮೊಗ್ಗದ ಎಲ್ಬಿಎಸ್ ನಗರದಲ್ಲಿ ಘಟನೆ ಸಂಭವಿಸಿದೆ. ಸ್ಥಳೀಯರಾದ ರೇಣುಕಾ ಅವರು ಗಾಂಧಿ ನಗರದಲ್ಲಿ ಅಂಗಡಿ ನಡೆಸುತ್ತಿದ್ದಾರೆ. ಕೆಲಸ ಮುಗಿಸಿ ರಾತ್ರಿ ಮನೆಗೆ ಮರಳುವಾಗ ಘಟನೆ ಸಂಭವಿಸಿದೆ.
ರೇಣುಕಾ ಅವರು ಎಲ್ಬಿಎಸ್ ನಗರ ರಸ್ತೆಯಲ್ಲಿ ರಾತ್ರಿ 9.30ರ ಹೊತ್ತಿಗೆ ನಡೆದು ಹೋಗುತ್ತಿದ್ದಾಗ ಘಟನೆಯಾಗಿದೆ. ಎದುರಿನಿಂದ ಬೈಕ್ನಲ್ಲಿ ಬಂದ ಯುವಕನೊಬ್ಬ ಅವರ ಕೈಯಲ್ಲಿದ್ದ ವ್ಯಾನಿಟಿ ಬ್ಯಾಗ್ ಕಸಿದುಕೊಳ್ಳಲು ಯತ್ನಿಸಿದ್ದಾನೆ. ಈ ಸಂದರ್ಭ ವ್ಯಾನಿಟಿ ಬ್ಯಾಗ್ ಎಳೆದ ರಭಸಕ್ಕೆ ರೇಣುಕಾ ಅವರು ಕೆಳಗೆ ಬಿದ್ದಿದ್ದಾರೆ. ಬೈಕ್ ಸವಾರ ಕೂಡ ಆಯಾತಪ್ಪಿ ಬಿದ್ದಿದ್ದಾನೆ ಎಂದು ಆರೋಪಿಸಲಾಗಿದೆ.
ಬಳಿಕ ರೇಣುಕಾ ಅವರ ಬಳಿ ಬಂದ ಯುವಕ ಕೈಯ್ಯಲ್ಲಿದ್ದ ವ್ಯಾನಿಟಿ ಬ್ಯಾಗ್ ಕಸಿದುಕೊಂಡು ಪರಾರಿಯಾಗಿದ್ದಾನೆ. ಅದರಲ್ಲಿ 10 ಸಾವಿರ ರೂ. ನಗದು, ಮೊಬೈಲ್ ಫೋನ್, ಎಟಿಎಂ ಕಾರ್ಡ್ ಇತ್ತು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ನಿಲ್ದಾಣದಲ್ಲಿ ಬಸ್ಸಿನಲ್ಲಿ 15 ನಿಮಿಷ ನಿದ್ರೆ, ಎದ್ದಾಗ ಸಾಫ್ಟ್ವೇರ್ ಇಂಜಿನಿಯರ್ಗೆ ಶಾಕ್, ಆಗಿದ್ದೇನು?
LATEST NEWS
- ದುರಸ್ತಿ ವೇಳೆ ಲೈನ್ ಮ್ಯಾನ್ಗೆ ಕರೆಂಟ್ ಶಾಕ್, ಸ್ಥಳದಲ್ಲೆ ಸಾವು

- ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

- ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

About The Editor
ನಿತಿನ್ ಆರ್.ಕೈದೊಟ್ಲು
















