SHIVAMOGGA LIVE NEWS | 25 AUGUST 2023
SHIMOGA : ಜಿಲ್ಲೆಯಾದ್ಯಂತ ಶ್ರದ್ಧಾ ಭಕ್ತಿಯಿಂದ ವರ ಮಹಾಲಕ್ಷ್ಮಿ ವ್ರತ (Varamahalakshmi Festival) ಆಚರಣೆ ಮಾಡಲಾಯಿತು. ಭಕ್ತರು ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಇನ್ನು, ಹಲವು ಕಡೆ ಮನೆ, ಮಳಿಗೆ, ಕಚೇರಿಗಳಲ್ಲಿ ದೇವಿಯ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜೆ ನೆರವೇರಿಸಿದರು.
![]() |
ಎಲ್ಲೆಲ್ಲಿ ಹೇಗಿದೆ ಪೂಜೆ?
ನಗರದ ವಿವಿಧೆಡೆ ಮನೆಗಳಲ್ಲಿ ಲಕ್ಷ್ಮಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿವಿಧ ಬಗೆಯ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು. ಹಲವು ಬಗೆಯ ತಿಂಡಿ, ತಿನಿಸು, ಹಣ್ಣುಗಳನ್ನು ದೇವಿಗೆ ಅರ್ಪಿಸಲಾಯಿತು.
ವಿವಿಧೆಡೆ ವ್ಯಾಪಾರ ಸ್ಥಳಗಳಲ್ಲಿಯು ಲಕ್ಷ್ಮಿ ದೇವಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು. ಅಂಗಡಿಗಳು, ಕಚೇರಿಗಳಲ್ಲಿ ಲಕ್ಷ್ಮಿ ಪೂಜೆಯನ್ನು ಶ್ರದ್ಧೆಯಿಂದ ನೆರವೇರಿಸಲಾಯಿತು.
ದೇಗುಲಗಳಲ್ಲಿ ವಿಶೇಷ ಪೂಜೆ
ವರ ಮಹಾಲಕ್ಷ್ಮಿ ವ್ರತದ (Varamahalakshmi Festival) ಹಿನ್ನೆಲೆ ನಗರದ ವಿವಿಧೆಡೆ ದೇಗುಲಗಳಲ್ಲಿಯು ವಿಶೇಷ ಪೂಜೆ ಸಲ್ಲಿಸಲಾಯಿತು. ನಗರದ ಕೋಟೆ ಶ್ರೀ ಮಾರಿಕಾಂಬ ದೇವಿಯ ದೇಗುಲದಲ್ಲಿ ದೇವಿಗೆ ಲಕ್ಷ್ಮಿ ಅಲಂಕಾರ ಮಾಡಲಾಗಿತ್ತು. ಬೆಳಗ್ಗೆಯಿಂದಲು ಮಹಿಳೆಯರು ದೊಡ್ಡ ಸಂಖ್ಯೆಯಲ್ಲಿ ದೇಗುಲಕ್ಕೆ ಆಗಮಿಸಿ ಪೂಜೆ ಸಲ್ಲಿಸಿದರು. ಗದ್ದುಗೆಗೆ ನಮಸ್ಕರಿಸಿ ಆಶೀರ್ವಾದ ಬೇಡಿದರು.
ಇನ್ನು, ಧಾರ್ಮಿಕ ದತ್ತಿ ವ್ಯಾಪ್ತಿಯ ದೇಗುಲಗಳಲ್ಲಿ ಸರ್ಕಾರದ ವತಿಯಿಂದ ಇವತ್ತು ಮಹಿಳೆಯರಿಗೆ ಬಳೆ, ಅರಿಶಿಣ, ಕುಂಕುಮವನ್ನು ಪ್ರಸಾದದ ರೂಪದಲ್ಲಿ ನೀಡಲಾಯಿತು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಕಳೆಗಟ್ಟಿದ ವರ ಮಹಾಲಕ್ಷ್ಮಿ ಹಬ್ಬ, ಹೂವು, ಹಣ್ಣು ಖರೀದಿ ಜೋರು, ಎಷ್ಟಿದೆ ಬೆಲೆ?
ಚಂದ್ರಗುತ್ತಿಗೆ ಶ್ರೀ ರೇಣುಕಾಂಬ ದೇವಿ ದೇವಸ್ಥಾನದಲ್ಲಿ ಮಹಿಳೆಯರಿಗೆ ಅರಿಶಿಣ ಕುಂಕುಮ, ಬಳೆ ಪ್ರಸಾದದ ರೂಪದಲ್ಲಿ ನೀಡಲಾಯಿತು. ಈ ಸಂದರ್ಭ ದೇವಸ್ಥಾನ ಸಮಿತಿ ಅಧ್ಯಕ್ಷ ಪ್ರಸನ್ನ ಶೇಟ್, ಕಾರ್ಯನಿರ್ವಾಹಣಧಿಕಾರಿ ಶಿವಪ್ರಸಾದ್, ಅರವಿಂದ್ ಅರ್ಚಕ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರಿತಾ ಕೃಷ್ಣ, ಸಮಿತಿಯ ಸದ್ಯಸ್ಯರಾದ ಲಲಿತಾ ಎಂ ಶೆಟ್ಟಿ, ಶಿವಶಂಕರ ಗೌಡ, ಗ್ರಾಮಸ್ಥರಾದ ಕೃಷ್ಣ,ಸಿಬ್ಬಂದಿ ಪ್ರಕಾಶ್, ಮಂಜಪ್ಪ, ಪೊಲೀಸ್ ಇಲಾಖೆಯ ಸಂದೀಪ್ ಮತ್ತಿತರರು ಇದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200