ಕ್ರಿಶ್ಚಿಯನ್ ಸಮುದಾಯದವರಿಗೆ ಸಾಲ, ಸಹಾಯಧನ, ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಜಿಲ್ಲಾ ಕರ್ನಾಟಕ ಕ್ರಿಶ್ಚಿಯನ್ (Christian) ಸಮುದಾಯ ಆಭಿವೃದ್ದಿ ನಿಗಮ ವತಿಯಿಂದ 2025-26 ನೇ ಸಾಲಿನ ಕ್ರಿಶ್ಚಿಯನ್ ಸಮುದಾಯದವರಿಗೆ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಿಇಟಿ/ನೀಟ್ ಮೂಲಕ ಆಯ್ಕೆಯಾಗುವ ಕ್ರಿಶ್ಚಿಯನ್ ಸಮುದಾಯದ ವಿದ್ಯಾರ್ಥಿಗಳು, ವೃತ್ತಿಪರ ಶಿಕ್ಷಣಗಳಾದ ಎಂಬಿಬಿಎಸ್, ಎಂಡಿ, ಎಂಎಸ್, ಬಿಇ, ಬಿಟೆಕ್, ಎಂಇ, ಎಂ-ಟೆಕ್, ಬಿಡಿಎಸ್, ಎಂಡಿಎಸ್, ಬಿ-ಆಯುಷ್, ಎಂ-ಆಯುಷ್, ಎಂಬಿಎ, ಎಂಸಿಎ, ಎಲ್‌ಎಲ್‌ಬಿ, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಮಾಸ್ಟರ್ ಆಫ್ ಆರ್ಕಿಟೆಕ್ಚರ್ ಕೋರ್ಸ್ ಮಾಡಲು ಬಯಸಿದರೆ ಅವರ ವ್ಯಾಸಂಗ ಪೂರ್ಣಗೊಳ್ಳುವವರೆಗೆ ಪ್ರತಿ ವರ್ಷಕ್ಕೆ ₹50,000 ದಿಂದ ₹5 ಲಕ್ಷದವರೆಗೆ ಸಾಲು ಮಂಜೂರು ಮಾಡಲಾಗುತ್ತದೆ. ವ್ಯಾಸಾಂಗ ಪೂರ್ಣಗೊಂಡ 6 ತಿಂಗಳ ನಂತರ ವಿದ್ಯಾರ್ಥಿಯು ಶೇ.2ರ ವಾರ್ಷಿಕ ಸೇವಾ ಶುಲ್ಕದೊಂದಿಗೆ ಸಾಲ ಮರುಪಾವತಿ ಮಾಡಬೇಕು.

ವಿದೇಶಿ ವ್ಯಾಸಂಗ ಸಾಲ ಯೋಜನೆಯಡಿ ಕ್ರಿಶ್ಚಿಯನ್ ಸಮುದಾಯ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ವ್ಯಾಸಂಗ ಮಾಡಲು ಮಾನ್ಯತೆ ಪಡೆದಿರುವ ಯಾವುದೇ ವಿದೇಶಿ ವಿಶ್ವವಿದ್ಯಾಲಯದಿಂದ ಮತ್ತು ಭಾರತದ ಪ್ರತಿಷ್ಠೆಯ ಐಐಟಿಎಸ್, ಐಐಎಂಎಸ್, ಐಎಸ್‌ಸಿ ಸಂಸ್ಥೆಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ವಿದ್ಯಾಭ್ಯಾಸ ಪಡೆಯಲು ₹20 ಲಕ್ಷದವರೆಗೆ ಸಾಲವನ್ನು ನಿಗಮಕ್ಕೆ ಆಸ್ತಿಯ ಅಡಮಾನದ ಮೇಲೆ ಮಾತ್ರ ಒದಗಿಸಲಾಗುವುದು ಎಂದು ತಿಳಿಸಲಾಗಿದೆ. 

ಇನ್ನಷ್ಟು ಯೋಜನೆಗಳಡಿ ಸೌಲಭ್ಯ

ಸ್ವಾವಲಂಬಿ ಸಾರಥಿ ಯೋಜನೆಯಡಿ ಟ್ಯಾಕ್ಸಿ, ಗೂಡ್ಸ್, ಆಟೋ ಖರೀದಿಗೆ ಸಾಲ, ಶ್ರಮ ಶಕ್ತಿ ಸಾಲ,. ವೃತ್ತಿ ಪ್ರೋತ್ಸಾಹ ಯೋಜನೆ, ಗಂಗಾ ಕಲ್ಯಾಣ ಸಹಾಯಧನ, ಶ್ರಮಶಕ್ತಿ ವಿಶೇಷ ಮಹಿಳಾ ಸಾಲ, ವ್ಯಾಪಾರ/ ಉದ್ದಿಮೆ ನೇರಸಾಲ ಯೋಜನೆ, ಸಮುದಾಯ ಆಧಾರಿತ ಕೌಶಲ್ಯ ಅಭಿವೃದ್ದಿ ತರಬೇತಿ ಯೋಜನೆ, ಮಹಿಳಾ ಸ್ವಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆಗಳ ಅಡಿ ಸಾಲ ಸೌಲಭ್ಯ ಪಡೆಯಬಹುದಾಗಿದೆ.

ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಈ ಯೋಜನೆಗಳ ಸಾಲ ಸೌಲಭ್ಯ ಪಡೆಯಲು ಅರ್ಜಿದಾರರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿರಬೇಕು. ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ₹3.50 ಲಕ್ಷದೊಳಗಿರಬೇಕು. ಪ್ರೋತ್ಸಾಹ ಯೋಜನೆಗೆ ಕುಟುಂಬದ ವಾರ್ಷಿಕ ಆದಾಯ ₹6 ಲಕ್ಷದೊಳಗಿರಬೇಕು. ಅರ್ಜಿದಾರರ ವಯಸ್ಸು ಕನಿಷ್ಠ 18 ರಿಂದ 55 ವರ್ಷಗಳ ಒಳಗಿರಬೇಕು.

ಅರ್ಜಿದಾರರು ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ವಾಸದ ದೃಢೀಕರಣ ಪತ್ರ ಮತ್ತು ಪಡಿತರ ಚೀಟಿ ಹೊಂದಿರಬೇಕು. ನಿಗಮದ ಇತರ ಯೋಜನೆಯಡಿ ಅರ್ಜಿದಾರರು ಅಥವಾ ಅವರ ಕುಟುಂಬದ ಸದಸ್ಯರು ನಿಗಮದಿಂದ ಈಗಾಗಲೇ ಸಾಲ ಸೌಲಭ್ಯ ಪಡೆದಿರಬಾರದು. ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ/ರಾಜ್ಯ ಸರ್ಕಾರಿ ನೌಕರರಾಗಿರಬಾರದು. ಅರ್ಜಿದಾರರು ಐಎಫ್‌ಎಸ್‌ಸಿ ಕೋಡ್ ಹೊಂದಿರುವ ಬ್ಯಾಂಕ್‌ಗಳಲ್ಲಿ ಬ್ಯಾಂಕ್ ಖಾತೆ ಹೊಂದಿರಬೇಕು.

ಆಸಕ್ತರು www.kccdonline.karnataka.gov.in ಮೂಲಕ ನ.30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08182-228262 ಗೆ ಸಂಪರ್ಕಿಸಬಹುದು.

ಇದನ್ನೂ ಓದಿ » ‘ಕುವೆಂಪು ವಿಶ್ವವಿದ್ಯಾಲಯದಲ್ಲಿ ಪಾಸಾದ ವಿದ್ಯಾರ್ಥಿಗಳು ಫೇಲ್‌ʼ, NSUI ಗರಂ

.Christian

Leave a Comment