ಶಿವಮೊಗ್ಗ ಲೈವ್.ಕಾಂ |SHIMOGA NEWS | 5 ಸೆಪ್ಟೆಂಬರ್ 2021
ಶಿವಮೊಗ್ಗದಲ್ಲಿ ಇವತ್ತು ಶಂಕುಸ್ಥಾಪನೆಯಾದ ಕಾಮಗಾರಿಗಳು ಕಾಲಮಿತಿಯೊಳಗೆ ಮತ್ತು ಗುಣಮಟ್ಟದೊಂದಿಗೆ ಪೂರ್ಣಗೊಳ್ಳಬೇಕು. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು.
ಶಿವಮೊಗ್ಗದ ಅರಕೇಶ್ವರ ದೇಗುಲದ ಬಳಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಚಿವ ಸಿ.ಸಿ.ಪಾಟೀಲ್, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಸಚಿವ ಕೆ.ಎಸ್.ಈಶ್ವರಪ್ಪ ಅವರ ಅವಧಿಯಲ್ಲಿ ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿವೆ. ಉಳಿದ ಕಾಮಗಾರಿಗಳಿಗೆ ನಮ್ಮ ಇಲಾಖೆಯಿಂದ ಸಹಕಾರ ನೀಡುತ್ತೇವೆ ಎಂದರು.
ಎಂಟು ಸಾವಿರ ಕೋಟಿ ರೂ.
ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ತಮ್ಮ ಅವಧಿಯಲ್ಲಿ ಜಿಲ್ಲೆಗೆ ಎಂಟು ಸಾವಿರ ಕೋಟಿ ರೂ. ವೆಚ್ಚದ ಯೋಜನೆಗಳನ್ನು ಬಂದಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳು ನಡೆಯುತ್ತಿವೆ ಎಂದು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿ, ವಿಮಾನ ನಿಲ್ದಾಣ ಕಾಮಗಾರಿಗೆ ಲೋಕೋಪಯೋಗಿ ಸಚಿವರಿಂದ ನೆರವು ಬೇಕು. ವಿಮಾನ ನಿಲ್ದಾಣ ಪೂರ್ಣಗೊಂಡರೆ ಜಿಲ್ಲೆಯ ಉದ್ಯೋಗವಕಾಶಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಯಾವೆಲ್ಲ ಕಾಮಗಾರಿ ಶಂಕುಸ್ಥಾಪನೆಯಾಯ್ತು?
ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಶಿವಮೊಗ್ಗ – ಚಿತ್ರದುರ್ಗ ನಡುವಿನ ರಸ್ತೆಯನ್ನು 516.96 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೇರಿಸುವ ಯೋಜನೆ ಬಾಕಿ ಉಳಿದ ಕಾಮಗಾರಿ.
ಶಿವಮೊಗ್ಗದ ವಿದ್ಯಾನಗರದ ಬಳಿಕ 43.90 ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿ.
ಶಿವಮೊಗ್ಗ ಬೈಪಾಸ್ ರಸ್ತೆಯಲ್ಲಿ ತುಂಗಾ ನದಿಗೆ ಅಡ್ಡಲಾಗಿ 20.12 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.
ವಿಧಾನ ಪರಿಷತ್ ಶಾಸಕ ಆರ್.ಪ್ರಸನ್ನಕುಮಾರ್, ಆರ್ಯ ವೈಶ್ಯ ಅಭಿವೃದ್ದಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ಮಹಾನಗಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ಉಪಮೇಯರ್ ಶಂಕರ್ ಗನ್ನಿ, ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ, ಪಾಲಿಕೆ ಸದಸ್ಯೆ ಯಮುನಾ ರಂಗೇಗೌಡ ಸೇರಿದಂತೆ ಹಲವರು ಇದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
Very good work.