ಲಂಡನ್’ನಿಂದ ಬಂದಿರುವ ಬಸವಣ್ಣನ ಪ್ರತಿಮೆ ಶಿವಮೊಗ್ಗದಲ್ಲಿ ಪ್ರತಿಷ್ಠಾಪನೆಗೆ ಆಗ್ರಹ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ  | SHIMOGA | 12 ಮಾರ್ಚ್ 2020

ಲಂಡನ್’ನಿಂದ ಶಿವಮೊಗ್ಗಕ್ಕೆ ತರಿಸಲಾಗಿರುವ ಬಸವಣ್ಣನ ಪುತ್ಥಳಿಯನ್ನು ಕೂಡಲೇ ಪ್ರತಿಷ್ಠಾಪಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ವೀರಶೈವ ಮಹಾಸಭಾದ ವತಿಯಿಂದ ಮಹಾನಗರ ಪಾಲಿಕೆ ಮೇಯರ್’ಗೆ ಇವತ್ತು ಮನವಿ ಸಲ್ಲಿಸಲಾಯಿತು.

ಒಂದೂವರೆ ವರ್ಷದ ಹಿಂದೆ ಅನಿವಾಸಿ ಭಾರತೀಯ ಡಾ.ನೀರಜ್ ಪಟೇಲ್ ಅವರು, ಬಸವೇಶ್ವರ ಪ್ರತಿಮೆಯನ್ನು ಕೊಡುಗೆಯಾಗಿ ನೀಡಿದರು. ಗಾಂಧಿ ಪಾರ್ಕ್ ಮುಂಭಾಗ, ಡಿವಿಎಸ್ ಕಾಲೇಜು ಸರ್ಕಲ್’ನಲ್ಲಿ ಪ್ರತಿಮೆ ಪ್ರತಿಷ್ಠಾಪನೆಗೆ ನಿರ್ಧರಿಸಲಾಗಿತ್ತು. ಇದಕ್ಕಾಗಿ ಮಹಾನಗರ ಪಾಲಿಕೆ ವತಿಯಿಂದ 25 ಲಕ್ಷ ರೂ. ಮೀಸಲಿಡಲಾಗಿದೆ. ಆದರೆ ಈವರೆಗೂ ಪ್ರತಿಮೆ ಪ್ರತಿಷ್ಠಾಪನೆ ಮಾಡಲು ಸಾಧ್ಯವಾಗಿಲ್ಲ.

ಈ ವಿಳಂಬ ಡಾ.ನೀರಜ್ ಪಟೇಲ್ ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆಗೆ ಅಗೌರವ ತರಲಿದೆ ಎಂದು ಮಹಾಸಭಾದ ಪ್ರಮುಖರು ಆರೋಪಿಸಿದರು. ಕೂಡಲೆ ಪ್ರತಿಮೆಯನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ವೀರಶೈವ ಮಹಾಸಭಾದ ಜಿಲ್ಲಾ ಅಧ್ಯಕ್ಷ ರುದ್ರಮುನಿ ಎನ್.ಸಜ್ಜನ್, ಪಾಲಿಕೆ ವಿರೋಧ ಪಕ್ಷದ ನಾಯಕ ಯೋಗೇಶ್ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment