ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 27 JANUARY 2024
SHIMOGA : ಸವಳಂಗ ರಸ್ತೆಯಲ್ಲಿ ಉಷಾ ನರ್ಸಿಂಗ್ ಹೋಂ ಸಮೀಪ ರೈಲ್ವೆ ಮೇಲ್ಸೇತುವೆ ಮೇಲೆ ಸಾರ್ವಜನಿಕ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಶುಕ್ರವಾರ ಸಂಸದ ಬಿ.ವೈ.ರಾಘವೇಂದ್ರ ಅವರು ಸೇತುವೆ ಕಾಮಗಾರಿಯನ್ನು ಪರಿಶೀಲಿಸಿದರು. ಬಳಿಕ ವಾಹನ ಸಂಚಾರಕ್ಕೆ ಮುಕ್ತಗೊಳಿಸಿರುವುದಾಗಿ ತಿಳಿಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನದಲ್ಲಿ ನಿರ್ಮಾಣಗೊಂಡ ರೈಲ್ವೆ ಮೇಲ್ಸೇತುವೆ ಕಾಮಗಾರಿ ಅಂತಿಮವಾಗಿ ಪೂರ್ಣಗೊಂಡಿದೆ. ಸದ್ಯಕ್ಕೆ ಲಘು ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಮುಂದಿನ ವಾರದಿಂದ ಭಾರೀ ವಾಹನಗಳು ಸಂಚರಿಸಬಹುದು ಎಂದು ಸಂಸದ ರಾಘವೇಂದ್ರ ಮಾಹಿತಿ ನೀಡಿದರು.
ಇದನ್ನೂ ಓದಿ – ವಿದ್ಯಾನಗರ ಮೇಲ್ಸೇತುವೆಗೆ ಬಿ.ಹೆಚ್.ರಸ್ತೆಯಲ್ಲಿ ಡಿವೈಡರ್ ರೆಡಿ, ಸವಳಂಗ ರಸ್ತೆ ಫ್ಲೈ ಓವರ್ ಪರಿಶೀಲಿಸಿದ ಎಂಪಿ
ಶಾಸಕ ಎಸ್.ಎನ್.ಚೆನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಎಸ್.ರುದ್ರೇಗೌಡ, ಡಿ.ಎಸ್.ಅರುಣ್, ಸರ್ಜಿ ಫೌಂಡೇಷನ್ ವ್ಯವಸ್ಥಾಪಕ ಧನಂಜಯ್ ಸರ್ಜಿ. ಸಂತೋಷ್ ಬಳ್ಳಿಕೆರೆ ಇದ್ದರು.
LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





