ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 23 AUGUST 2023
SHIMOGA : ನಗರದಲ್ಲಿ ಸುಗಮ ಸಂಚಾರಕ್ಕೆ ಅನುವಾಗುಂತೆ ಪಾರ್ಕಿಂಗ್ ವ್ಯವಸ್ಥೆಯಲ್ಲಿ (Vehicle Parking) ಬದಲಾವಣೆ ತರಲಾಗಿದೆ. ವಿವಿಧ ರಸ್ತೆಗಳಲ್ಲಿ ದಿನ ಬಿಟ್ಟು ದಿನ ಒಂದೊಂದು ಬದಿಯಲ್ಲಿ ಪಾರ್ಕಿಂಗ್ (Vehicle Parking) ಮಾಡುವಂತೆ ಆದೇಶಿಸಲಾಗಿದೆ. ಇನ್ನು, ಕೆಲವು ಕಡೆ ವಾಹನಗಳ ಪಾರ್ಕಿಂಗ್ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶಿಸಿದ್ದಾರೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಎಲ್ಲೆಲ್ಲಿ ದಿನ ಬಿಟ್ಟು ದಿನ ಪಾರ್ಕಿಂಗ್?
ರಸ್ತೆ 1 : ರತ್ನಮ್ಮ ಮಾಧವ ರಾವ್ ರಸ್ತೆಯ ಸುರಭಿ ಹೋಟೆಲ್ ಕ್ರಾಸ್‍ನಿಂದ ಆದಿತ್ಯ ಡಯಾಗ್ನೋಸ್ಟಿಕ್ ಕ್ರಾಸ್‍ವರೆಗೆ ರಸ್ತೆಯ ಎರಡೂ ಬದಿಯಲ್ಲಿ ದಿನ ಬಿಟ್ಟು ದಿನ ವಾಹನ ನಿಲುಗಡೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ರಸ್ತೆ 2 : ಪಾರ್ಕ್ ಬಡಾವಣೆಯ ಮುಖ್ಯ ರಸ್ತೆಯ ಕೆನರಾ ಬ್ಯಾಂಕ್ ಕ್ರಾಸ್ (ಹಳೆಯ ಸಿಂಡಿಕೇಟ್ ಬ್ಯಾಂಕ್ ) ನಿಂದ ಬಾಲರಾಜ್ ಅರಸ್ ರಸ್ತೆಯ ಜಾಯಾಲುಕಾಸ್ (ಮಥುರಾ ಪ್ಯಾರಡೈಸ್ ) ಕ್ರಾಸ್ ವರೆಗೆ ರಸ್ತೆಯ ಎರಡೂ ಬದಿಯಲ್ಲಿ ದಿನ ಬಿಟ್ಟು ದಿನ ವಾಹನ ನಿಲುಗಡೆ.
ರಸ್ತೆ 3 : ವಾಸವಿ ವೃತ್ತದಿಂದ ರಾಘವೇಂದ್ರ ಸ್ವಾಮಿ ಮಠದ ರಸ್ತೆಯವರೆಗೆ ರಸ್ತೆಯ ಎರಡೂ ಬದಿಯಲ್ಲಿ ದಿನಬಿಟ್ಟು ದಿನ ವಾಹನ ನಿಲುಗಡೆ.
ರಸ್ತೆ 4 : ತಿಲಕನಗರ ಮುಖ್ಯ ರಸ್ತೆಯ ಭರತ್ ನ್ಯೂರೋ ಕ್ಲಿನಿಕ್‌ನಿಂದ ಪಾರ್ಕ್ ಬಡವಣೆಯ ಮುಖ್ಯ ರಸ್ತೆ (ರಾಘವೇಂದ್ರ ಸ್ವಾಮಿ ಮಠದ ಹಿಂಭಾಗ ರಸ್ತೆ) ವರೆಗೆ ರಸ್ತೆಯ ಎರಡೂ ಬದಿಯಲ್ಲಿ ದಿನ ಬಿಟ್ಟು ದಿನ ವಾಹನ ನಿಲುಗಡೆ.
ರಸ್ತೆ 5 : ಕುವೆಂಪು ರಸ್ತೆ ನಂದಿ ಪೆಟ್ರೋಲ್ ಬಂಕ್ ನಿಂದ ಶಿವಶಂಕರ ಗ್ಯಾರೇಜ್ ವರೆಗೆ ರಸ್ತೆಯ ಎರಡೂ ಬದಿಯಲ್ಲಿ ದಿನ ಬಿಟ್ಟು ದಿನ ವಾಹನ ನಿಲುಗಡೆ.
ರಸ್ತೆ 6 : ಪಂಡಿತ್ ದೀನದಯಾಳ್ ರಸ್ತೆಯ ಆಕಾಶ್ ಇನ್ ಹೋಟೇಲ್ ನಿಂದ ಪಂಚಮುಖಿ ಅಂಜನೇಯ ಸ್ವಾಮಿ ದೇವಸ್ಥಾನದವರೆಗೆ ರಸ್ತೆಯ ಎರಡೂ ಬದಿಯಲ್ಲಿ ದಿನ ಬಿಟ್ಟು ದಿನ ವಾಹನ ನಿಲುಗಡೆ.
ವಿವಿಧೆಡೆ ವಾಹನ ನಿಲುಗಡೆ ನಿಷೇಧ
ನಿಷೇಧ 1 : ತಿಲಕ ನಗರ ಮುಖ್ಯ ರಸ್ತೆಯಿಂದ ಭರತ್ ನ್ಯೂರೋ ಕ್ಲಿನಿಕ್ ರಸ್ತೆಯವರೆಗೆ ಬಲಭಾಗದಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ. ರಸ್ತೆಯ ಎಡಭಾಗದಲ್ಲಿ ವಾಹನ ನಿಲುಗಡೆ ಮಾಡಬೇಕು.
ನಿಷೇಧ 2 : ತಿಲಕ ನಗರ ರಾಘವೇಂದ್ರ ಸ್ವಾಮಿ ಮಠದ ರಸ್ತೆಯಿಂದ ಜಿಲ್ಲಾ ಭೋವಿ ಸಮುದಾಯ ಭವನದವರೆಗೆ ಎಡ ಭಾಗದಲ್ಲಿ ವಾಹನ ನಿಲುಗಡೆ ನಿಷೇಧಿಸಿ, ಬಲ ಭಾಗದಲ್ಲಿ ವಾಹನ ನಿಲುಗಡೆ.
ನಿಷೇಧ 3 : ಕುವೆಂಪು ರಸ್ತೆಯ ನಂಜಪ್ಪ ಆಸ್ಪತ್ರೆ ಕ್ರಾಸ್‌ನಿಂದ ಕೆನರಾ ಬ್ಯಾಂಕ್ ಕ್ರಾಸ್ ವರೆಗೆ ರಸ್ತೆಯ ಎರಡೂ ಬದಿಯಲ್ಲಿ ವಾಹನ ನಿಲುಗಡೆ ನಿಷೇಧ.
ನಿಷೇಧ 4 : ಹೆಲಿಪ್ಯಾಡ್ ಸರ್ಕಲ್‌ನಿಂದ ಕುವೆಂಪು ರಸ್ತೆ ನಂದಿ ಪೆಟ್ರೋಲ್ ಬಂಕ್‌ವರೆಗೆ ವಾಹನ ನಿಲುಗಡೆ ನಿಷೇಧ.
ನಿಷೇಧ 5 : ಪಂಡಿತ್ ದೀನ್ ದಯಾಳ್ ರಸ್ತೆಯಲ್ಲಿ ಜ್ಯೋತಿ ಗಾರ್ಡನ್ ನಿಂದ ಆಕಾಶ್ ಇನ್ ಹೋಟೆಲ್ ವರೆಗೆ ವಾಹನ ನಿಲುಗಡೆ ನಿಷೇಧ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಆಟೋಗಳ ದಿಢೀರ್ ತಪಾಸಣೆ, ಖುದ್ದು ಫೀಲ್ಡಿಗಿಳಿದ ರಕ್ಷಣಾಧಿಕಾರಿ
ನಿಷೇಧ 6 : ಪಂಡಿತ್ ದೀನ್ ದಯಾಳ್ ರಸ್ತೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಬಾಲಾಜಿ ಟೂರ್ಸ್ ಅಂಡ್ ಟ್ರಾವೆಲ್ಸ್‍ವರೆಗೆ ವಾಹನ ನಿಲುಗಡೆ ನಿಷೇಧ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದರೆ ಮನೆಗೆ ನೊಟೀಸ್, ಯೋಜನೆ ಜಾರಿಗೆ ದಿನಾಂಕ ಫಿಕ್ಸ್
ನಿಷೇಧ 7 : ಕುವೆಂಪು ರಸ್ತೆಯ ಶಿವಶಂಕರ ಗ್ಯಾರೇಜ್‍ನಿಂದ ಬಿ.ಜೆ.ಪಿ ಪಾರ್ಟಿ ಆಫೀಸ್ ಕ್ರಾಸ್‍ವರೆಗೆ ಬಲಭಾಗದಲ್ಲಿ ಮಾತ್ರ ವಾಹನ ನಿಲುಗಡೆಗೆ ಆದೇಶಿಸಲಾಗಿದೆ.