ಈದ್‌ ಮೆರವಣಿಗೆ, ಶಿವಮೊಗ್ಗದಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 20 SEPTEMBER 2024 : ಈದ್ ಮಿಲಾದ್ ಹಬ್ಬದ (Eid) ಪ್ರಯುಕ್ತ ಸೆ.22ರಂದು ಶಿವಮೊಗ್ಗ ನಗರದಲ್ಲಿ ಮುಸ್ಲಿಂ ಸಮುದಾಯದ ವತಿಯಿಂದ ಮೆರವಣಿಗೆ ಆಯೋಜಿಸಲಾಗಿದೆ. ಈ ಹಿನ್ನೆಲೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ವಿವಿಧೆಡೆ ವಾಹನ ಸಂಚಾರ, ನಿಲುಗಡೆ ನಿಷೇಧ ಮತ್ತು ವಾಹನಗಳ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ.

[su_note note_color=”#EBEDEF ” text_color=”#000000″]

» ಯಾವೆಲ್ಲ ಮಾರ್ಗದಲ್ಲಿ ಮೆರವಣಿಗೆ?

ಈದ್ ಮಿಲಾದ್ ಮೆರವಣಿಗೆಯು ಗಾಂಧಿಬಜಾರ್‌ನ ಜಾಮೀಯ ಮಸೀದಿಯಿಂದ ಪ್ರಾರಂಭವಾಗಲಿದೆ. ಗಾಂಧಿ ಬಜಾರ್ 2ನೇ ಕ್ರಾಸ್, ನಾಗಪ್ಪನ ಕೇರಿ, ಲಷ್ಕರ್ ಮೊಹಲ್ಲಾ ಮುಖ್ಯ ರಸ್ತೆಯ ಓಲ್ಡ್‌ ಬಾರ್‌ ಲೈನ್ ರಸ್ತೆ, ಪೆನ್ಷನ್ ಮೊಹಲ್ಲಾ, ಬಾಲ್‌ರಾಜ್ ಅರಸ್ ರಸ್ತೆ, ಮಹಾವೀರ ಸರ್ಕಲ್, ಗೋಪಿ ಸರ್ಕಲ್, ನೆಹರು ರಸ್ತೆ, ಅಮೀರ್ ಅಹ್ಮದ್ ಸರ್ಕಲ್ ಮಾರ್ಗವಾಗಿ ಬಿ.ಹೆಚ್ ರಸ್ತೆ, ಅಶೋಕ ಸರ್ಕಲ್, ಎನ್ ಟಿ ರಸ್ತೆ, ಗುರುದೇವ ರಸ್ತೆ, ಕ್ಲಾರ್ಕ್‌ ಪೇಟೆ, ನೂರಾನಿ ಮಸೀದಿ, ಕೆ.ಆರ್ ಪುರಂ ರಸ್ತೆ ಮಾರ್ಗವಾಗಿ ಆಮೀರ್ ಅಹಮ್ಮದ್ ಸರ್ಕಲ್ ತಲುಪುತ್ತದೆ.[/su_note]

ವಾಹನಗಳ ಮಾರ್ಗ ಬದಲಾವಣೆ

» ಭದ್ರಾವತಿ, ಬೆಂಗಳೂರು, ಎನ್.ಆರ್.ಪುರ ಕಡೆಯಿಂದ ಬರುವ ಎಲ್ಲಾ ಭಾರಿ ವಾಹನ ಮತ್ತು ಎಲ್ಲಾ ಬಸ್ಸುಗಳು ಎಂ.ಆರ್.ಎಸ್ ಸರ್ಕಲ್ ನಿಂದ ಬೈಪಾಸ್ ರಸ್ತೆ ಮೂಲಕ ಹೋಗಬೇಕು.

» ಚಿತ್ರದುರ್ಗ, ಹೊಳೆಹೊನ್ನೂರಿನಿಂದ ಬರುವ ಮತ್ತು ಹೋಗುವ ಎಲ್ಲಾ ಭಾರಿ ವಾಹನ ಮತ್ತು ಬಸ್ ಗಳು ಹೊಳೆಹೊನ್ನೂರು ಸರ್ಕಲ್, ಎಂ.ಆರ್.ಎಸ್ ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮೂಲಕ ತೆರಳಬೇಕು.

» ಹೊನ್ನಾಳಿ, ದಾವಣಗೆರೆಯಿಂದ ಬರುವ ಎಲ್ಲಾ ಭಾರೀ ವಾಹನ ಮತ್ತು ಬಸ್‌ಗಳು ಸಂಗೊಳ್ಳಿ ರಾಯಣ್ಣ ಸರ್ಕಲ್, ಶಂಕರ ಮಠ ಸರ್ಕಲ್, ಹೊಳೆಹೊನ್ನೂರು ಸರ್ಕಲ್, ವಿದ್ಯಾನಗರ, ಎಂ.ಆರ್.ಎಸ್ ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.

bh-road-in-Shimoga-shivappanayaka-statue

» ಕೆ.ಎಸ್.ಆರ್.ಟಿ.ಸಿ. ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ ಹರಿಹರ, ದಾವಣಗೆರೆಗೆ ಹೋಗುವ ಎಲ್ಲಾ ಬಸ್‌ಗಳು ಮತ್ತು ಭಾರಿ ಸರಕು ವಾಹನಗಳು ಬೈಪಾಸ್ ಮೂಲಕ ಎಂ.ಆರ್.ಎಸ್ ಸರ್ಕಲ್, ವಿದ್ಯಾನಗರ, ಶಂಕರಮಠ ಸರ್ಕಲ್, ಸಂಗೊಳ್ಳಿ ರಾಯಣ್ಣ ಸರ್ಕಲ್ ಮುಖಾಂತರ ಹೋಗಬೇಕು.

» ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು, ಭದ್ರಾವತಿ ಕಡೆಗೆ ಹೋಗುವ ಎಲ್ಲಾ ವಾಹನಗಳು ಬೈಪಾಸ್ ರಸ್ತೆ ಎಂ.ಆರ್.ಎಸ್ ಸರ್ಕಲ್ ಮುಖಾಂತರ ಹೋಗುವುದು.

BH-Road-in-front-of-Sahyadri-College.

» ಶಿಕಾರಿಪುರ, ಸೊರಬ, ಆನವಟ್ಟಿ ಕಡೆಯಿಂದ ಶಿವಮೊಗ್ಗಕ್ಕೆ ಬರುವ ಮತ್ತು ಹೊರ ಹೋಗುವ ಎಲ್ಲಾ ಬಸ್‌ಗಳು ಮತ್ತು ಭಾರಿ ವಾಹನಗಳು ಉಷಾ ನರ್ಸಿಂಗ್ ಹೋಂ ಸರ್ಕಲ್, ಲಕ್ಷ್ಮೀ ಟಾಕೀಸ್ ಸರ್ಕಲ್ ಪೊಲೀಸ್ ಚೌಕಿ, ಆಲ್ಕೋಳ ಸರ್ಕಲ್ ಮಾರ್ಗವಾಗಿ ಸಾಗರ ರಸ್ತೆಯಲ್ಲಿ ಸಂಚರಿಸುವುದು.

ವಾಹನ ಸಂಚಾರ, ನಿಲುಗಡೆ ನಿಷೇಧ

ಲಷ್ಕರ್ ಮೊಹಲ್ಲಾ ರಸ್ತೆಯಲ್ಲಿ ಎಲ್ಲಾ ವಾಹನಗಳ ಸಂಚಾರ ನಿಷೇಧವಿರಲಿದೆ. ಇನ್ನು ಮೆರವಣಿಗೆ ಸಾಗುವ ಮಾರ್ಗದ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ಮತ್ತು ವಾಹನ ನಿಲುಗಡೆ ನಿಷೇಧಿಸಲಾಗಿದೆ.

ಈ ಮಾರ್ಗಗಳಲ್ಲಿ ಪೊಲೀಸ್ ವಾಹನಗಳು, ಅತಿಗಣ್ಯ ವ್ಯಕ್ತಿಗಳ ವಾಹನಗಳು, ಅಂಬುಲೆನ್ಸ್ ಹಾಗೂ ಮೂಲ ಸೌಕರ್ಯ ಒದಗಿಸುವ ವಾಹನಗಳ ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ » ಅಧಿಕಾರಿಗಳು, ಸಿಬ್ಬಂದಿ ಲಂಚ ಕೇಳ್ತಿದ್ದಾರಾ? ನಿಮ್ಮೂರಿಗೆ ಬರ್ತಿದ್ದಾರೆ ಲೋಕಾಯುಕ್ತ, ಯಾವಾಗ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 20, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment