SHIVAMOGGA LIVE NEWS
SHIMOGA | ಈದ್ ಮಿಲಾದ್ (Eid Milad) ಅಂಗವಾಗಿ ಮುಸ್ಲಿಂ ಸಮುದಾಯದವರು ಶಿವಮೊಗ್ಗ ನಗರದಲ್ಲಿ ಮೆರವಣಿಗೆ ನಡೆಸಲಿದ್ದಾರೆ. ಈ ಹಿನ್ನೆಲೆ ವಿವಿಧೆಡೆ ವಾಹನ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶಿಸಿದ್ದಾರೆ.
ಅ.9ರಂದು ಮಧ್ಯಾಹ್ನ 3 ಗಂಟೆಗೆ ಮೆರವಣಿಗೆ ಆರಂಭವಾಗಲಿದೆ. ಮುಸ್ಲಿಂ ಸಮುದಾಯದವರು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಎಲ್ಲೆಲ್ಲಿ ಸಾಗಲಿದೆ ಮೆರವಣಿಗೆ? Eid Milad
ಗಾಂಧಿ ಬಜಾರ್ ಜಾಮಿಯಾ ಮಸೀದಿ ಮುಂಭಾಗದಿಂದ ಮೆರವಣಿಗೆ ಆರಂಭವಾಗಲಿದೆ. ಅಲ್ಲಿಂದ ಗಾಂಧಿ ಬಜಾರ್ 2ನೇ ಅಡ್ಡರಸ್ತೆ, ನಾಗಪ್ಪನ ಕೇರಿ, ಲಷ್ಕರ್ ಮೊಹಲ್ಲಾ ಮುಖ್ಯ ರಸ್ತೆ ಮೂಲಕ ಓಲ್ಡ್ ಬಾರ್ ಲೈನ್ ರಸ್ತೆ, ಪೆನ್ಷನ್ ಮೊಹಲ್ಲಾ ಮೂಲಕ ಸಾಗಲಿದೆ.
ಬಳಿಕ ಬಿ.ಹೆಚ್.ರಸ್ತೆ, ಮೀನಾಕ್ಷಿ ಭವನ, ಟ್ಯಾಂಕ್ ಬಾಂಡ್ ರಸ್ತೆ, ಬಾಪೂಜಿ ನಗರ ಮುಖ್ಯ ರಸ್ತೆ, ಟ್ಯಾಂಕ್ ಮೊಹಲ್ಲಾ, ಬಾಲರಾಜ ಅರಸ್ ರಸ್ತೆ, ಮಹಾವೀರ ಸರ್ಕಲ್, ಗೋಪಿ ಸರ್ಕಲ್, ನೆಹರೂ ರಸ್ತೆ ಮೂಲಕ ಅಮೀರ್ ಅಹಮದ್ ಸರ್ಕಲ್ ತಲುಪಲಿದೆ.
ಬಿ.ಹೆಚ್.ರಸ್ತೆ ಮೂಲಕ ಅಶೋಕ ಸರ್ಕಲ್, ಎನ್.ಟಿ.ರಸ್ತೆ, ಗುರುದೇವ ರಸ್ತೆ, ಕ್ಲಾರ್ಕ್ ಪೇಟೆ, ನೂರಾನಿ ಮಸೀದಿ, ಕೆ.ಆರ್.ಪುರಂ ರಸ್ತೆ ಮಾರ್ಗವಾಗಿ ಅಮೀರ್ ಅಹಮದ್ ಸರ್ಕಲ್ ತಲುಪಲಿದೆ.
ವಾಹನ ಮಾರ್ಗ ಬದಲಾವಣೆ Eid Milad
ಈದ್ ಮಿಲಾದ್ (Eid Milad) ಮೆರವಣಿಗೆ ಹಿನ್ನೆಲೆ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರದ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆವರು ಆದೇಶಿಸಿದ್ದಾರೆ.
ಮೆರವಣಿಗೆ ಸಾಗುವ ಮಾರ್ಗದಲ್ಲಿ ಮತ್ತು ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ವಾಹನಗಳ ಸಂಚಾರ ಮತ್ತು ನಿಲುಗಡೆ ನಿಷೇಧಿಸಲಾಗಿದೆ. ಇನ್ನು, ಭದ್ರಾವತಿ ಕಡೆಯಿಂದ ಬರುವ ಎಲ್ಲಾ ಭಾರೀ ವಾಹನಗಳು, ಬಸ್ಸುಗಳು ಬೈಪಾಸ್ ರಸ್ತೆ ಮೂಲಕ ತೆರಳಬೇಕು.
ಚಿತ್ರದುರ್ಗ ಹೊಳೆಹೊನ್ನೂರಿನಿಂದ ಬರುವ ಮತ್ತು ಹೋಗುವ ಭಾರೀ ವಾಹನಗಳು ಎಂ.ಆರ್.ಎಸ್ ಮೂಲಕ ಬೈಪಾಸ್ ರಸ್ತೆಯಿಂದ ತೆರಳಬೇಕು. ಚಿತ್ರದುರ್ಗ, ಹೊಳೆಹೊನ್ನೂರಿಗೆ ತೆರಳಲು ಇದೆ ಮಾರ್ಗ ಬಳಸಬೇಕಿದೆ.
ಹೊನ್ನಾಳಿ, ದಾವಣಗೆರೆಯಿಂದ ಬರುವ ಎಲ್ಲಾ ಭಾರೀ ವಾಹನಗಳು ಸಂಗೊಳ್ಳಿ ರಾಯಣ್ಣ ಸರ್ಕಲ್ ನಿಂದ ಶಂಕರಮಠ ರಸ್ತೆ, ಹೊಳೆ ಬಸ್ ನಿಲ್ದಾಣ ಮೂಲಕ ಎಂ.ಆರ್.ಎಸ್ ಸರ್ಕಲ್ ತಲುಪಬೇಕು. ಅಲ್ಲಿಂದ ಬೈಪಾಸ್ ರಸ್ತೆ ಮೂಲಕ ಸಾಗಬೇಕು. ಹೊನ್ನಾಳಿ, ದಾವಣಗೆರೆಗೆ ತೆರಳಲು ಇದೆ ಮಾರ್ಗ ಬಳಕೆ ಮಾಡಬೇಕು.
ಲಷ್ಕರ್ ಮೊಹಲ್ಲಾ ರಸ್ತೆಯಲ್ಲಿ ಎಲ್ಲಾ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಇನ್ನು, ಮಾರ್ಗ ಬದಲಾವಣೆ ಪೊಲೀಸ್ ವಾಹನಗಳು, ಅತಿಗಣ್ಯ ವ್ಯಕ್ತಿಗಳ ವಾಹನಗಳು, ಆಂಬುಲೆನ್ಸ್ ಮತ್ತು ಮೂಲ ಸೌಕರ್ಯ ಒದಗಿಸುವ ವಾಹನಗಳ ಅನುಕೂಲಕ್ಕೆ ತಕ್ಕ ಹಾಗೆ ಹೊರತು ಪಡಿಸಬಹುದಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ನಟ ವಿನೋದ್ ಪ್ರಭಾಕರ್, ಗಾಯಕ ಆಲ್ ಓಕೆ ನೋಡಲು ಮುಗಿಬಿದ್ದ ಅಭಿಮಾನಿಗಳು
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ