ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 12 APRIL 2024
SHIMOGA : ನಗರದ ವಿವಿಧೆಡೆ ಗುರುವಾರ ಮಳೆಯಾಗಿದೆ. ಮಳೆ ನಂತರ ಕುವೆಂಪು ರಸ್ತೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಕೇಂದ್ರದ ಸಮೀಪ, ರಸ್ತೆಯಲ್ಲಿ ಚಲಿಸುತ್ತಿದ್ದ ದ್ವಿಚಕ್ರ ವಾಹನಗಳು ಸ್ಕಿಡ್ ಆಗಿ ಬಿದ್ದವು. ಸುಮಾರು 15 ವಾಹನಗಳು ಸ್ಕಿಡ್ ಆಗಿ ಬಿದ್ದು, ಸವಾರರಿಗೆ ಸಣ್ಣಪುಟ್ಟ ಗಾಯವಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಪಶ್ಚಿಮ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದರು. ಬ್ಯಾರಿಕೇಡ್ ಹಾಕಿ ದ್ವಿಚಕ್ರ ವಾಹನ ಸವಾರರಿಗೆ ನಿಧಾನವಾಗಿ ಚಲಿಸುವಂತೆ ಸೂಚಿಸಿದರು. ಮರದಿಂದ ಬಿದ್ದ ದ್ರವದಿಂದಾಗಿ ರಸ್ತೆ ಜಾರುವಂತಾಗಿರಬೇಕು ಎಂದು ಶಂಕಿಸಲಾಗಿದೆ. ಸಂಚಾರ ಪೊಲೀಸರ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಹಿಂದೆ ಕುವೆಂಪು ರಸ್ತೆಯಲ್ಲಿ ನಂಜಪ್ಪ ಆಸ್ಪತ್ರೆ ಮುಂಭಾಗದ ಮರದಿಂದ ಬಿದ್ದ ಅಂಟು ದ್ರವದಿಂದಾಗಿ ರಸ್ತೆಯಲ್ಲಿ ವಾಹನಗಳು ಸ್ಕಿಡ್ ಆಗಿ ಬಿದ್ದಿದ್ದವು.
ಗಾಳಿ, ಮಳೆಗೆ ಮರ, ಕಂಬಗಳು ಧರೆಗೆ
ANANDAPURA : ಆನಂದಪುರ ಹಾಗೂ ಸುತ್ತಮುತ್ತ ಗುಡುಗು, ಗಾಳಿ ಸಹಿತ ಭಾರಿ ಮಳೆ ಸುರಿದಿದೆ. ಆನಂದಪುರ, ಯಡೇಹಳ್ಳಿ, ಗೌತಮಪುರ, ಭೈರಾಪುರದ ಸೇರಿದಂತೆ ವಿವಿಧೆಡೆ ಮಳೆ, ಗುಡುಗು, ಗಾಳಿ ಬೀಸಿದೆ. 15ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿವೆ. ಹೀಗಾಗಿ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಿತ್ತು. ಮರಗಳು ರಸ್ತೆ ಮೇಲೆ ಬಿದ್ದು ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು.
ರೈತರ ಮೊಗದಲ್ಲಿ ಸಂತಸ
SHIKARIPURA : ಭಾರಿ ಬಿಸಿಲು, ಧಗೆಯಿಂದಾಗ ಜನರು ಹೈರಾಣಾಗಿದ್ದರು. ವಿವಿಧೆಡೆ ಸುರಿದ ಮಳೆಗೆ ರೈತರ ಮೊಗದಲ್ಲಿ ಸಂತಸ ಮೂಡಿಸಿದೆ. ಶಿಕಾರಿಪುರ, ಕುಂಸಿ ಭಾಗದಲ್ಲಿ ಉತ್ತಮ ಮಳೆಯಾಗಿದೆ.
ಇದನ್ನೂ ಓದಿ – ಕಾರು, ಗ್ಯಾರೇಜ್‌ನಲ್ಲಿದ್ದ ವಸ್ತುಗಳು ಭಸ್ಮ, ಮಾಲೀಕನಿಗೆ ಗಾಯ, ಹೇಗಾಯ್ತು ಘಟನೆ?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422