ಶಿವಮೊಗ್ಗ: ರಸ್ತೆ ಕಾಮಗಾರಿ ಹಿನ್ನೆಲೆ ಶಿವಮೊಗ್ಗ – ಹೊನ್ನಾಳಿ ರಸ್ತೆಯಲ್ಲಿರುವ ಹೊನ್ನಾಳಿ ಫ್ಲೈ ಓವರ್ ಮೇಲೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ಬ್ಯಾರಿಕೇಡ್ ಅಳವಡಿಸಿ ಮಣ್ಣು ಹಾಕಿ ಫ್ಲೈ ಓವರ್ (Fly over) ಪ್ರವೇಶವನ್ನು ಬಂದ್ ಮಾಡಲಾಗಿದೆ. ವಾಹನಗಳಿಗೆ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ – ಹೊಸಪೇಟೆ ರಾಜ್ಯ ಹೆದ್ದಾರಿಯಲ್ಲಿ ಫ್ಲೈ ಓವರ್ ಇಳಿಜಾರು ಮುಕ್ತಾಯ ಜಾಗ ಮತ್ತು ಚತುಷ್ಪಥ ಕೂಡವ ರಸ್ತೆ ಜಾಗದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ. ಇದರಿಂದಾಗಿ ಈ ಭಾಗದಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ.
ವಾಹನಗಳಿಗೆ ಪರ್ಯಾಯ ಮಾರ್ಗ
ಶಿವಮೊಗ್ಗ – ಹೊನ್ನಾಳಿ – ಹೊಸಪೇಟೆ ಕಡೆಗೆ ಸಂಚರಿಸುವ ವಾಹನಗಳು ಶಿವಮೊಗ್ಗದ ಸವಳಂಗ ರಸ್ತೆ, ಉಷಾ ನರ್ಸಿಂಗ್ ಹೋಂ, ಜೆಎನ್‌ಎನ್‌ಸಿಇ ಕಾಲೇಜು ಬಳಿ ಬಲಕ್ಕೆ ತಿರುಗಿ ಕುವೆಂಪು ನಗರ, ಶಾಂತಿನಗರ ಮೂಲಕ ಶಿವಮೊಗ್ಗ – ಹೊನ್ನಾಳಿ ರಸ್ತೆಗೆ ತಲುಪಬಹುದು.
ಹೊನ್ನಾಳಿ ಕಡೆಯಿಂದ ಶಿವಮೊಗ್ಗ ಕಡೆಗೆ ಬರುವ ವಾಹನಗಳು ಹೊನ್ನಾಳಿ ರಸ್ತೆಯಿಂದ ಶಾಂತಿನಗರ ಕ್ರಾಸ್, ಶಾಂತಿನಗರ ಸರ್ಕಲ್ ಕಡೆಯಿಂದ ಎಡಕ್ಕೆ ತಿರುಗಿ, ರಾಗಿಗುಡ್ಡ ರಸ್ತೆಯಿಂದ ಕೆಎಸ್‌ಸಿಎ ಸ್ಟೇಡಿಯಂ ಬಳಿ ಸವಳಂಗ ರಸ್ತೆಗೆ ತಲುಪಿ ಉಷಾ ನರ್ಸಿಂಗ್ ಹೋಂ ಕಡೆಯಿಂದ ಶಿವಮೊಗ್ಗ ನಗರ ತಲುಪಬಹುದು.


ಇದನ್ನೂ ಓದಿ » ಮಹಿಳೆಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ರೆಡಿಯಾಗ್ತಿದೆ ಅಕ್ಕ ಪಡೆ, ನೀವು ಸೇರಬಹುದು, ಹೇಗೆ?
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






