ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 16 ಏಪ್ರಿಲ್ 2020
ಲಾಕ್‌ಡೌನ್ ಉಲ್ಲಂಘಿಸಿ ವಾಹನಗಳಲ್ಲಿ ಸಂಚರಿಸುತ್ತಿದ್ದವರಿಗೆ ಶಿವಮೊಗ್ಗ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಸುಖಾಸುಮ್ಮನೆ ಸಿಟಿ ರೌಂಡ್ಸ್‌ಗೆ ಬಂದವರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿದ ಪೊಲೀಸರು ಬೈಕು, ಕಾರು, ಆಟೋ ಸೇರಿದಂತೆ ಹಲವು ವಾಹನಗಳನ್ನು ವಶಕ್ಕ ಪಡೆದಿದ್ದಾರೆ. ಸರಿಯಾದ ಕಾರಣ ನೀಡದೆ ವಾಹನಗಳಲ್ಲಿ ಸುತ್ತಾಡುತ್ತಿದ್ದ ಹಿನ್ನೆಲೆ, ವಾಹನಗಳನ್ನು ಸೀಜ್ ಮಾಡಲಾಗಿದೆ.
ರಾಜಕಾರಣಿಗಳಿಗೂ ಬಿಸಿ ಮುಟ್ಟಿಸಿದ ಪೊಲೀಸ್
ಕೆಲವು ರಾಜಕಾರಣಿಗಳಿಗು ಶಿವಮೊಗ್ಗ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಎಪಿಎಂಸಿ ಅಧ್ಯಕ್ಷರು ಎಂಬ ನೇಮ್ ಪ್ಲೇಟ್ ಹೊಂದಿದ್ದ ಕಾರು ತಡೆದು, ಒಳಗಿದ್ದವರಿಗೆ ಬಿಸಿ ಮುಟ್ಟಿಸಿದರು. ಕಾರಿನಲ್ಲಿದ್ದ ಮಾಜಿ ಅಧ್ಯಕ್ಷರನ್ನು ತರಾಟೆಗೆ ತೆಗೆದುಕೊಂಡರು. ಚಿಕ್ಕಮಗಳೂರು ಜಿಲ್ಲೆಯ ಶಾಸಕರೊಬ್ಬರ ಭಾವಚಿತ್ರ, ಪಕ್ಷವೊಂದರ ಧ್ವಜ ಹಾಕಿಕೊಂಡು ಬಂದಿದ್ದ ಕಾರನ್ನು ಜೈಲ್ ಸರ್ಕಲ್‌ನಲ್ಲಿ ತಡೆದು, ಕ್ಲಾಸ್ ತೆಗೆದುಕೊಂಡರು.
ಡಿವೈಎಸ್‌ಪಿ ಉಮೇಶ್ ಈಶ್ವರ್ ನಾಯ್ಕ್, ಸಿಪಿಐ ವಸಂತ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]