SHIVAMOGGA LIVE NEWS | 28 AUGUST 2023
ಭದ್ರಾವತಿಯಲ್ಲಿ ವೇಳಾಂಗಣಿ ಮಾತೆ ಉತ್ಸವ
BHADRAVATHI : ಗಾಂಧಿ ನಗರದ ವೇಳಾಂಗಣಿ ಆರೋಗ್ಯ ಮಾತೆಯ ಪುಣ್ಯಕ್ಷೇತ್ರದಲ್ಲಿ ಆ.29ರಿಂದ ಸೆಪ್ಟೆಂಬರ್ 8ರವರೆಗೆ ವೇಳಾಂಗಣಿ ಮಾತೆ ಉತ್ಸವ ( utsava) ನಡೆಯಲಿದೆ. ಪ್ರತಿದಿನ ಧಾರ್ಮಿಕ (Religious) ಆಚರಣೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಧರ್ಮಗುರು ಫಾದರ್ ಸ್ಟೀವನ್ ಡೇಸಾ ತಿಳಿಸಿದರು. ಆ.29ರಂದು ಸಂಜೆ 5.30ಕ್ಕೆ ಧ್ವಜಾರೋಹಣ ನೆರವೇರಲಿದೆ. ಆ.30ರಂದು ಧರ್ಮಸಭೆ ಸೇರಿದಂತೆ ವಿವಿಧ ಕಾರ್ಯಕ್ರಮ ನಡೆಯಲಿದೆ. ಸೆ.7ರಂದು ಭದ್ರಾವತಿ ನಗರದಲ್ಲಿ ಮಾತೆಯ ಮೆರವಣಿಗೆ ನಡೆಯಲಿದೆ. ಸೆ.8ರಂದು ವಿಶೇಷ ಪೂಜೆ, ಅನ್ನದಾನ, ಮಹೋತ್ಸವ ನಡೆಯಲಿದೆ ಎಂದು ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗದ ವಾಹನ ಸವಾರರೆ ಹುಷಾರ್, ಇವತ್ತಿಂದ ಆಟೋಮ್ಯಾಟಿಕ್ ದಂಡ ಫಿಕ್ಸ್, ಪೊಲೀಸ್ ವಿಡಿಯೋ ವೈರಲ್
ಶಿವಮೊಗ್ಗದಲ್ಲಿ ಅಂಡರ್ 14 ಅಥ್ಲೇಟಿಕ್ಸ್
SHIMOGA : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಅನುದಾನ ರಹಿತ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಸಂಯುಕ್ತ ಆಶ್ರಯದಲ್ಲಿ 14 ವರ್ಷ ವಯೋಮಿತಿಯೊಳಗಿನ ಅನುದಾನ ರಹಿತ ಹಿರಿಯ ಪ್ರಾಥಮಿಕ ಶಾಲಾ ಬಾಲಕ ಮತ್ತು ಬಾಲಕಿಯರ ವಲಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾ ಕೂಟ ಆಯೋಜಿಸಲಾಗಿದೆ. ಎರಡು ದಿನ ನೆಹರೂ ಕ್ರೀಡಾಂಗಣದಲ್ಲಿ ನಡೆಯುವ ಕ್ರೀಡಾಕೂಟಕ್ಕೆ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ನಿರಂಜನ್‌ಮೂರ್ತಿ ಬಿ.ಹೆಚ್. ಗುಂಡು ಎಸೆಯುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ಸಂಘದ ಅಧ್ಯಕ್ಷ ರಾ.ಹ.ತಿಮ್ಮೇನಹಳ್ಳಿ, ಕಾರ್ಯದರ್ಶಿ ಕೆ.ಜಿ.ಮಠಪತಿ, ದೈಹಿಕ ಶಿಕ್ಷಕರಾದ ಅಜಯ್, ಗಿರೀಶ್, ಇಮ್ತಿಯಾಜ್ ಸೇರಿದಂತೆ ಮತ್ತಿತರರಿದ್ದರು.
ಇದನ್ನೂ ಓದಿ –ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಯ್ತು? – TOP 10 NEWS | ಓದಲು ಇಲ್ಲಿ ಕ್ಲಿಕ್ ಮಾಡಿ
ಸಾಗರದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ
ANANDAPURA : ಶಾಸಕರು ಮತ್ತು ಬೆಂಬಲಿಗರು ಅಧಿಕಾರಿಗಳ ಮೂಲಕ ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದಾರೆ. ಸಾಗರ ತಾಲೂಕಿನಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರತ್ನಕರ ಹೊನಗೋಡು ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮರಳು, ಮಣ್ಣು ಸಾಗಿಸುವ ಬಿಜೆಪಿ (bjp) ಕಾರ್ಯಕರ್ತರ ವಾಹನಗಳನ್ನು ಮಾತ್ರ ವಶಕ್ಕೆ ಪಡೆಯಲಾಗುತ್ತಿದೆ. ಆ ಬಳಿಕ ಬಿಡುಗಡೆ ಮಾಡುತ್ತಿಲ್ಲ. ಶಾಸಕರ ಬೆಂಬಲಿಗರ ವಾಹನಗಳನ್ನು ವಶಕ್ಕೆ ಪಡೆ ಕೆಲವೆ ಹೊತ್ತಿನಲ್ಲಿ ಬಿಡುಗಡೆ ಮಾಡಲಾಗುತ್ತಿದೆ ಎಂದು ಆಪಾದಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200