ಬೆಂಗಳೂರಲ್ಲಿ ಗಲಭೆ ಮಾಡಿದವರ ಗಡಿಪಾರು ಮಾಡಿ, ಸಂಘಟನೆಗಳನ್ನು ನಿಷೇಧಿಸಿ, ಶಿವಮೊಗ್ಗದಲ್ಲಿ ಪ್ರತಿಭಟನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

117702852 1188438618184223 2807915213080176620 n.jpg? nc cat=111& nc sid=110474& nc ohc=VE0J8XyiMG0AX 36iLB& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಆಗಸ್ಟ್ 2020

ಬೆಂಗಳೂರು ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ ಗಲಭೆಗೆ ಕಾರಣವಾಗಿರುವ SDPI ಮತ್ತು PFI ಸಂಘಟನೆಗಳನ್ನು ನಿಷೇಧ ಮಾಡಬೇಕು ಎಂದು ಒತ್ತಾಯಿಸಿ ಶಿವಮೊಗ್ಗದಲ್ಲಿ ವಿಶ‍್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಗಲಭೆಕೋರರನ್ನು ಗಡಿಪಾರು ಮಾಡಬೇಕು. SDPI ಮತ್ತು PFI ಸಂಘಟನೆಗಳಿಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐನ ನಂಟು ಇದೆ. ಹಾಗಾಗಿ ಇವೆರಡು ಸಂಘಟನೆಗಳನ್ನು ನಿಷೇಧ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂಬಂಧ ಜಿಲ್ಲಾಧಿಕಾರಿ ಮೂಲಕ ರಾಜ್ಯ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು. ವಿಹೆಚ್‍ಪಿ ಜಿಲ್ಲಾ ಕಾರ್ಯದರ್ಶಿ ಎಸ್.ಆರ್.ನಟರಾಜ್, ಬಜರಂಗದಳ ಜಿಲ್ಲಾ ಸಂಚಾಲಕ ನಾರಾಯಣ್ ಜೀ ವರ್ಣೇಕರ್, ವಿಹೆಚ್‍ಪಿ ನಗರ ಅಧ್ಯಕ್ಷ ಸತೀಶ್ ಮುಂಚೆಮನೆ, ನಗರ ಕಾರ್ಯದರ್ಶಿ ಸುಧಾಕರ್, ಬಜರಂಗದಳ ನಗರ ಸಂಚಾಲಕ ರಾಜೇಶ್ ಗೌಡ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment