ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಆಗಸ್ಟ್ 2020
ಬೆಂಗಳೂರು ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ ಗಲಭೆಗೆ ಕಾರಣವಾಗಿರುವ SDPI ಮತ್ತು PFI ಸಂಘಟನೆಗಳನ್ನು ನಿಷೇಧ ಮಾಡಬೇಕು ಎಂದು ಒತ್ತಾಯಿಸಿ ಶಿವಮೊಗ್ಗದಲ್ಲಿ ವಿಶ‍್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಗಲಭೆಕೋರರನ್ನು ಗಡಿಪಾರು ಮಾಡಬೇಕು. SDPI ಮತ್ತು PFI ಸಂಘಟನೆಗಳಿಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐನ ನಂಟು ಇದೆ. ಹಾಗಾಗಿ ಇವೆರಡು ಸಂಘಟನೆಗಳನ್ನು ನಿಷೇಧ ಮಾಡಬೇಕು ಎಂದು ಒತ್ತಾಯಿಸಿದರು.
ಈ ಸಂಬಂಧ ಜಿಲ್ಲಾಧಿಕಾರಿ ಮೂಲಕ ರಾಜ್ಯ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು. ವಿಹೆಚ್‍ಪಿ ಜಿಲ್ಲಾ ಕಾರ್ಯದರ್ಶಿ ಎಸ್.ಆರ್.ನಟರಾಜ್, ಬಜರಂಗದಳ ಜಿಲ್ಲಾ ಸಂಚಾಲಕ ನಾರಾಯಣ್ ಜೀ ವರ್ಣೇಕರ್, ವಿಹೆಚ್‍ಪಿ ನಗರ ಅಧ್ಯಕ್ಷ ಸತೀಶ್ ಮುಂಚೆಮನೆ, ನಗರ ಕಾರ್ಯದರ್ಶಿ ಸುಧಾಕರ್, ಬಜರಂಗದಳ ನಗರ ಸಂಚಾಲಕ ರಾಜೇಶ್ ಗೌಡ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]