ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS
SHIMOGA | ಬೇಡ ಜಂಗಮ (BEDA JANGAMA) ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಆಗ್ರಹಿಸಿ ಅಖಿಲ ಕರ್ನಾಟಕ ಬೇಡ ಜಂಗಮ ಸಂಘಟನೆಗಳ ಒಕ್ಕೂಟದಿಂದ ಅ.18 ರಂದು ವಿಧಾನಸೌಧ ಚಲೋ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ಬೇಡ ಜಂಗಮ ಸಮಾಜದ ತಾಲೂಕು ಅಧ್ಯಕ್ಷ ಲೋಕೇಶ್ ದೊಡ್ಡಮಠ್ ತಿಳಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲೋಕೇಶ್ ದೊಡ್ಡಮಠ್ ಅವರು, ಬೇಡ ಜಂಗಮ (BEDA JANGAMA) ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸುವಂತೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹೋರಾಟ ನಡೆಯುತ್ತಿದೆ. ಒಕ್ಕೂಟದ ಅಧ್ಯಕ್ಷ ಬಿ.ಡಿ.ಹಿರೇಮಠ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟ 100 ದಿನ ಪೂರೈಸಿದೆ. ಆದರೂ ಸರ್ಕಾರ ಈ ಕುರಿತು ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಭೆ ರದ್ದುಗೊಳಿಸಿ ಅನ್ಯಾಯ ಮಾಡಿದ್ದಾರೆ (BEDA JANGAMA)
ಬೇಡ ಜಂಗಮರ ಹೋರಾಟದ ಕುರಿತು ಚರ್ಚೆಗೆ ಸಮಾಜ ಕಲ್ಯಾಣ ಇಲಾಖೆ ಸಚಿವರು ಅ.12ರಂದು ಸಭೆ ಕರೆದಿದ್ದರು. ಆದರೆ ಬಹು ನಿರೀಕ್ಷಿತ ಸಭೆಯನ್ನು ರದ್ದುಗೊಳಿಸಲಾಗಿದೆ. ಈ ಮೂಲಕ ಬಿಜೆಪಿ ಸರ್ಕಾರ ನಮ್ಮ ಸಮಾಜಕ್ಕೆ ಅನ್ಯಾಯ ಮಾಡಿದೆ ಎಂದು ಲೋಕೇಶ್ ದೊಡ್ಡಮಠ್ ಆರೋಪಿಸಿದರು.
ಕ್ಲಿಕ್ ಮಾಡಿ ಇದನ್ನೂ ಓದಿ | ಮೈಸೂರು – ತಾಳಗುಪ್ಪ ಕುವೆಂಪು ಎಕ್ಸ್ ಪ್ರೆಸ್ ರೈಲು ಕಾಡು ಕೋಣಕ್ಕೆ ಡಿಕ್ಕಿ
ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಬೇಡ ಜಂಗಮ ಸಂಘಟನೆಗಳ ಒಕ್ಕೂಟಗಳ ನೇತೃತ್ವದಲ್ಲಿ ಸತ್ಯ ಪ್ರತಿಪಾದನಾ ಸತ್ಯಗ್ರಹ ಹಮ್ಮಿಕೊಂಡಿದ್ದೇವೆ. ನಮ್ಮ ಸತ್ಯಾಗ್ರಹವನ್ನು ಹತ್ತಿಕ್ಕಲು ಯತ್ನಿಸುತ್ತಿರುವ ಸರ್ಕಾರದ ವಿರುದ್ಧ ಅ.18ರಂದು ಬೆಂಗಳೂರು ವಿಧಾನ ಸೌಧ ಚಲೋ ಚಳುವಳಿ ನಡೆಯಲಿದೆ. ಪಂಚ ಪೀಠಾಧೀಶರರು, ನಾಡಿನ ಮಠಾಧೀಶರು, ಸಮಾಜದ ಲಕ್ಷಾಂತರ ಸಂಖ್ಯೆಯ ಜನರು ಚಳುವಳಿಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಕ್ಲಿಕ್ ಮಾಡಿ ಇದನ್ನೂ ಓದಿ | ಇಲ್ಲಿ ರಸ್ತೆ ಮಧ್ಯೆ ಗುಂಡಿಗಳಿವೆಯೋ, ಗುಂಡಿಗಳ ಅಕ್ಕಪಕ್ಕ ಅಲ್ಲಲ್ಲಿ ಡಾಂಬಾರ್ ಹಾಕಿದ್ದಾರೋ?
ಬೇಡ ಜಂಗಮ ಸಮಾಜದ ಜಿಲ್ಲಾ ಕಾರ್ಯದರ್ಶಿ ಕೆ.ಆರ್. ಸೋಮನಾಥ್, ಖಜಾಂಚಿ ಉಮೇಶ್ ಹಿರೇಮಠ್, ಕಾನೂನು ಸಲಹೆಗಾರ ಎಂ.ಎಸ್. ವಾಗೀಶ್, ಪ್ರಮುಖರಾದ ಟಿ.ಬಿ. ಸೋಮಶೇಖರ್, ಪ್ರೇಮಾ ವೀರಪ್ಪಯ್ಯ, ಎಂ.ವಿ. ಸುನಂದಾ, ಬಸಯ್ಯ, ಜ್ಯೋತಿ ನಾಗರಾಜಯ್ಯ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿದ್ದರು.
ಕ್ಲಿಕ್ ಮಾಡಿ ಇದನ್ನೂ ಓದಿ | JNN ಇಂಜಿನಿಯರಿಂಗ್ ಕಾಲೇಜಿನಲ್ಲಿ 2 ದಿನ ಅಂತಾರಾಷ್ಟ್ರೀಯ ಸಮ್ಮೇಳನ, ಏನೆಲ್ಲ ಚರ್ಚೆಯಾಗಲಿದೆ?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.