‘ನಾನು ಚುನಾವಣೆಗೆ ನಿಲ್ಲಬೇಕೋ ಬೇಡವೋ ಅನ್ನುವುದನ್ನು ಅವರು ತೀರ್ಮಾನಿಸುತ್ತಾರೆ’

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಸೆಪ್ಟೆಂಬರ್ 2021

ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ನಾಳೆ ಹಾಗೂ ನಾಡಿದ್ದು ದಾವಣಗೆರೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯದಲ್ಲಿನ ಜ್ವಲಂತ ಸಮಸ್ಯೆಗಳು ಹಾಗೂ ಮುಂಬರುವ ಚುನಾವಣೆಗಳನ್ನು ಹೇಗೆ ಎದುರಿಸಬೇಕು ಎಂಬ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.

ಸಂಪುಟ ಸೇರುತ್ತಾರಾ ವಿಜಯೇಂದ್ರ?

ವಿಜಯೇಂದ್ರ ಸಚಿವ ಸಂಪುಟ ಸೇರುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಯಾವುದೇ ಹುದ್ದೆಯ ನಿರೀಕ್ಷೆಯನ್ನಿಟ್ಟುಕೊಂಡು ಕೆಲಸ ಮಾಡುತ್ತಿಲ್ಲ. ರಾಷ್ಟ್ರ ಹಾಗೂ ರಾಜ್ಯ ಮಟ್ಟದ ನಾಯಕರು ಯಾರಿಗೆ ಯಾವ ಸಂದರ್ಭದಲ್ಲಿ ಯಾವ ಸ್ಥಾನ ನೀಡಬೇಕು ಎಂಬುದನ್ನು ತಿರ್ಮಾನ ಮಾಡುತ್ತಾರೆ. ನಾನು ಯಾವ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲಬೇಕು ಅಥವಾ ಚುನಾವಣೆಗೆ ನಿಲ್ಲಬೇಕೇ ಅಥವಾ ಬೇಡವೇ ಎಂಬುದನ್ನೂ ಪಕ್ಷದ ವರಿಷ್ಠರೇ ತೀರ್ಮಾನ ಮಾಡಲಿದ್ದಾರೆ ಎಂದರು.

NH nephrolody%2Bad %2Bkannada 10

ದೇವಸ್ಥಾನ ತೆರವು ವಿಷಯ ಸಂಬಂಧ ಪ್ರತಿಕ್ರಿಯೆ ನೀಡಿದ ವಿಜಯೇಂದ್ರ, ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ದೇವಾಲಯ ಒಡೆಯಲಾಗುತ್ತಿದೆ. ಆದರೆ ಸಿಎಂ ಕ್ಯಾಬಿನೇಟ್ ನಲ್ಲಿ ದೇವಾಲಯಗಳ ತೆರವಿಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. ಸುಪ್ರೀಂ ಕೋರ್ಟ್ ನಲ್ಲಿ ನಮಗೆ ಏಕೆ ಹಿನ್ನಡೆಯಾಗಿದೆ ಎಂದು ತಿಳಿದುಕೊಳ್ಳಬೇಕಿದೆ. ಜೊತೆಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆಯೇ ಎಂಬುದನ್ನು ಗಮನಿಸಬೇಕಿದೆ ಎಂದರು.

ಅಧಿಕಾರಿಗಳು ಈ ಬಗ್ಗೆ ಯೋಚನೆ ಮಾಡಬೇಕಿದೆ. ಸುಪ್ರೀಂ ಕೋರ್ಟ್ ತೀರ್ಪು ಇದ್ದರೂ ಜನರ ಭಾವನೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಕೆಲಸವನ್ನು ಅಧಿಕಾರಿಗಳು ಮಾಡಬೇಕಿದೆ. ಮುಂದಿನ ದಿನಗಳಲ್ಲಿ ಈಸಮಸ್ಯೆ ಪರಿಹಾರವಾಗಲಿದೆ ಎಂದರು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

Leave a Comment