ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಜುಲೈ 2020
ಅರಣ್ಯ ಇಲಾಖೆಯಿಂದ ಭದ್ರಾ ಹುಲಿ ಮೀಸಲು ಪರಿಸರ ಸೂಕ್ಷ್ಮ ವಲಯ ಅಧಿಸೂಚನೆ ಹೊರಡಿಸಲಾಗಿದೆ. ಇದನ್ನು ವಿರೋಧಿಸಿ ನಾಗರೀಕ ಸಮಿತಿ ನೇತೃತ್ವದಲ್ಲಿ ಈ ಯೋಜನೆಯ ವ್ಯಾಪ್ತಿಗೊಳಪಡುವ ಜನರು ಜಿಲ್ಲಾಧಿಕಾರಿ ಮೂಲಕ ಪರಿಸರ, ಅರಣ್ಯ ಹಾಗೂ ಹವಮಾನ ಬದಲಾವಣೆ ಮಂತ್ರಾಲಯದ ಕಾರ್ಯದರ್ಶಿಗೆ ಮನವಿ ಸಲ್ಲಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕೇಂದ್ರ ಸರ್ಕಾರದ ಪರಿಸರ ಹಾಗೂ ಅರಣ್ಯ ಮಂತ್ರಾಲಯವು ಕಳೆದ ಜೂನ್ 15 ರಂದು ಭದ್ರಾ ಹುಲಿ ಮೀಸಲು ಪರಿಸರ ಸೂಕ್ಷ್ಮ ವಲಯದ ಅಧಿಸೂಚನೆಯನ್ನು ಹೊರಡಿಸಿದೆ. ಇದರಲ್ಲಿ ಶಿವಮೊಗ್ಗ ಜಿಲ್ಲೆಯ ಉಂಬ್ಳೇಬೈಲು, ಕಾಕನಹೊಸೂಡಿ ಹಾಗೂ ಲಿಂಗಾಪುರ ಗ್ರಾಮ ಸೇರಿದಂತೆ ಸುಮಾರು 12 ಗ್ರಾಮಗಳ ಜನವಸತಿ ಹಾಗೂ ಕೃಷಿ ಭೂಮಿ ಪ್ರದೇಶ ಸೇರಿಕೊಂಡಿದೆ. ಈ ಗ್ರಾಮಗಳ ಜನರ ಅಭಿಪ್ರಾಯವನ್ನು ಪಡೆಯದೇ ಏಕಾಏಕಿ ಅವೈಜ್ಞಾನಿಕವಾಗಿ ಅಧಿಸೂಚನೆ ಹೊರಡಿಸಿದ್ದು, ಕೇಂದ್ರ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.
ಸೂಕ್ಷ್ಮ ವಲಯ ಘೋಷಣೆಯಿಂದ ಈ ಗ್ರಾಮಗಳಲ್ಲಿ ಮಂದೆ ಅರಣ್ಯ ಹಾಗೂ ಕಂದಾಯ ಭೂಮಿಗಳಲ್ಲಿ ಸಾಗುವಳಿ ಹಾಗೂ ವಸತಿ ಹಕ್ಕುಗಳ ಸಕ್ರಮಕ್ಕೆ, ಹಕ್ಕುದಾರಿಕೆಗೆ ತುಂಬಾ ಹಿನ್ನಡೆ ಉಂಟಾಗಲಿದೆ. ಈ ಕೂಡಲೇ ಕೇಂದ್ರ ಸರ್ಕಾರ ಸೂಕ್ಷ್ಮ ವಲಯ ಅಧಿಸೂಚನೆಯಿಂದ ಜನವಸತಿ, ಕೃಷಿ ಭೂಮಿ ಇರುವ ಗ್ರಾಮಗಳನ್ನು ಕೈಬಿಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಮಹಾನಗರ ಪಾಲಿಕೆ ಸದಸ್ಯ ರಮೇಶ್ ಹೆಗ್ಡೆ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]