ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಶಿವಮೊಗ್ಗ: ಜಿಲ್ಲಾಡಳಿತದ ವತಿಯಿಂದ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಇವತ್ತು ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಾರ್ವಜನಿಕರು, ಶಾಲೆ, ಕಾಲೇಜು ವಿದ್ಯಾರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದರು. ಆದರೆ ಅತಿಥಿಗಳು ಮಾತ್ರ ನಾಪತ್ತೆಯಾಗಿದ್ದರು (Seats).
ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳ ಗೈರು ಹಾಜರಿ ಎದ್ದು ಕಾಣುತ್ತಿತ್ತು. ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್, ಮಹಾನಗರ ಪಾಲಿಕೆ ಮಾಜಿ ಕಾರ್ಪೊರೇಟರ್ ಹೆಚ್.ಸಿ.ಯೋಗೇಶ್ ಹೊರೆತು ಮತ್ತಿನ್ಯಾವ ಜನಪ್ರತಿನಿಧಿಯು ಕಾರ್ಯಕ್ರಮದತ್ತ ಸುಳಿಯಲಿಲ್ಲ. ಹಾಗಾಗಿ ಇವರಿಗೆ ಮೀಸಲಿಟ್ಟ ಸ್ಥಾನಗಳು ಖಾಲಿ ಉಳಿದಿದ್ದವು.
ಕಳೆದ ಆಗಸ್ಟ್‌ನಲ್ಲಿ ನೆಹರು ಕ್ರೀಡಾಂಗಣದಲ್ಲಿಯೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು. ಸಚಿವ ಮಧು ಬಂಗಾರಪ್ಪ ಧ್ವಜಾರೋಹಣ ನೆರವೇರಿಸಿದ್ದರು. ಆಗ ಎಲ್ಲ ಜನಪ್ರತಿನಿಧಿಗಳು ವೇದಿಕೆ ಮೇಲೆ ಗುಂಪುಗೂಡಿದ್ದರು. ಮಿನಿಸ್ಟರ್ ಹಿಂದೆ ಮುಂದೆ ನಿಂತು ಫೋಟೊಗಳಿಗೆ ಪೋಸ್ ನೀಡಿದ್ದರು. ಇವತ್ತು ಸಚಿವ ಮಧು ಬಂಗಾರಪ್ಪ ಬೆಂಗಳೂರಿನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಆದರೆ ಉಳಿದ ಜನಪ್ರತಿನಿಧಿಗಳು, ನಿಗಮ ಮಂಡಳಿಗಳ ಅಧ್ಯಕ್ಷರು, ಸದಸ್ಯರು ಯಾರೊಬ್ಬರು ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಾಣಿಸಲಿಲ್ಲ. ಶಿಷ್ಟಾಚಾರದಂತೆ ಅವರಿಗಾಗಿ ಸೀಟುಗಳ ವ್ಯವಸ್ಥೆಯಾಗಿದ್ದರು ಕೊನೆಯ ತನಕ ಖಾಲಿ ಉಳಿದಿದ್ದವು.



ಇದನ್ನೂ ಓದಿ » ಶಿವಮೊಗ್ಗದಲ್ಲಿ ಹೇಗಿತ್ತು ರಾಜ್ಯೋತ್ಸವ? ಫೋಟೊಗಳಲ್ಲಿ ನಾಡ ಉತ್ಸವದ ವೈಭವ
Seats






