ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Published On : ಮಾರ್ಚ್ 28, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: ಶ್ರೀಗಂಧ ಸಂಸ್ಥೆ ವತಿಯಿಂದ ಬೆಂಗಳೂರಿನ ವಿಷ್ಣು ಸಹಸ್ರನಾಮ ಗ್ಲೋಬಲ್ ಟ್ರಸ್ಟ್ ಹಾಗೂ ಶಿವಮೊಗ್ಗ ಭಜನಾ ಪರಿಷತ್ ಸಹಯೋಗದಲ್ಲಿ ಮಾ.30ರ ಬೆಳಗ್ಗೆ 9:30ಕ್ಕೆ ಕುವೆಂಪು ರಂಗಮಂದಿರದಲ್ಲಿ ವಿಷ್ಣು ಸಹಸ್ರನಾಮ (Vishnu Sahasranama) ಪಾರಾಯಣ ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ ಅಧ್ಯಕ್ಷ ಸಂದೇಶ್‌ ಉಪಾಧ್ಯ ತಿಳಿಸಿದರು.

Sunrise Facility Services, Sri sai Trust Shimoga

ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂದೇಶ್‌ ಉಪಾದ್ಯ, ಪಾರಾಯಣ ಕಾರ್ಯಕ್ರಮದ ಸಾನ್ನಿಧ್ಯವನ್ನು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಗಳು ಹಾಗೂ ಬಾಳಗಾರು ಮಠದ ಕಿರಿಯ ಪೀಠಾಧಿಪತಿ ಶ್ರೀ ಅಕ್ಷೋಭ್ಯ ರಾಮಪ್ರಿಯತೀರ್ಥ ಶ್ರೀಪಾದರು ವಹಿಸಿ ಆಶೀರ್ವಚನ ನೀಡಲಿದ್ದಾರೆ. ಶ್ರೀಗಂಧ ಸಂಸ್ಥೆ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

Sandesh-Upadaya-Sri-nagasubramanya-temple-shimoga.

ಮಾ.13, 14 ಮತ್ತು 15ರಂದು ನಗರದ ಸುಮಾರು 700ಕ್ಕೂ ಹೆಚ್ಚು ಮನೆಗಳಲ್ಲಿ ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ ನಡೆದಿದೆ. ಎಲ್ಲರಿಗೂ ಸಂಸ್ಥೆ ವತಿಯಿಂದ ಪಾರಾಯಣದ ಪುಸ್ತಕವನ್ನು ಉಚಿತವಾಗಿ ವಿತರಿಸಲಾಯಿತು ಎಂದರು.

ಇದನ್ನೂ ಓದಿ – ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಶ್ರೀಗಂಧ ಸಂಸ್ಥೆ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಮಾತನಾಡಿ, ಕಾರ್ಯಕ್ರಮದಲ್ಲಿ ಹಿಂದುಳಿದ ವಿವಿಧ ಸಮಾಜದವರು ಭಾಗವಹಿಸುತ್ತಿದ್ದು, 1200ಕ್ಕೂ ಹೆಚ್ಚು ಮನೆಗಳಲ್ಲಿ ಪಾರಾಯಣ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.

ಪ್ರಮುಖರಾದ ಜೋಯಿಸ್ ರಾಮಾಚಾರ್, ಶ್ರೀಕಾಂತ್, ಕೆ.ಜಿ. ಕುಮಾರಶಾಸ್ತ್ರಿ, ಶುಭ ರಾಘವೇಂದ್ರ, ನಿರ್ಮಲಾ, ಕುಬೇಂದ್ರಪ್ಪ ಮತ್ತಿತರರಿದ್ದರು.

Number 1 News Website in shimoga - Shivamogga Live

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಮಾರ್ಚ್ 28, 2026

Leave a Comment