‘ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಉಪಕರಣ ತರಿಸಿ 15 ದಿನವಾಯ್ತು, ಅಳವಡಿಸಿಲ್ಲ’, ರಾಘವೇಂದ್ರ ಗರಂ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Visibility

ಶಿವಮೊಗ್ಗ: ವಿಸಿಬಲಿಟಿ (Visibility) ಸಮಸ್ಯೆಯಿಂದಾಗಿ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನಗಳು ಲ್ಯಾಂಡ್‌ ಆಗಲು ಸಮಸ್ಯೆಯಾಗುತ್ತಿದೆ. ಇದನ್ನು ನೀಗಿಸಲು 15 ದಿನದ ಹಿಂದೆಯೇ ಉಪಕರಣ ತರಿಸಲಾಗಿದೆ. ಆದರೆ ಇದನ್ನು ಅಳವಡಿಸಲು ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ (ಕೆಎಸ್‌ಐಐಡಿಸಿ) ವಿಳಂಬ ಮಾಡುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ವೈ.ರಾಘವೇಂದ್ರ, ವಿಮಾನ ನಿಲ್ದಾಣದ ವಿಸಿಬಲಿಟಿ ಸಮಸ್ಯೆ ನೀಗಿಸಲು ಜೂನ್‌ ಕೊನೆಯ ವಾರದಲ್ಲಿ ಉಪಕರಣ ತರಿಸಲಾಗಿದೆ. ಇದರ ಅಳವಡಿಕೆಗೆ ಫೌಂಡೇಷನ್‌, ಆಂಟೆನಾ ನಿರ್ಮಿಸಲು ಸುಮಾರು ಒಂದು ಕೋಟಿ ರೂಪಾಯಿ ಅಗತ್ಯವಿದೆ. ಆದರೆ ಈತನಕ ಹಣವ ಬಿಡುಗಡೆಯಾಗಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

MP-BY-raghavendra-about-Shimoga-Airport-Flight

ಕೇಂದ್ರ ಸಚಿವರ ವಿಮಾನಕ್ಕೆ ಸಮಸ್ಯೆ

ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಸಿದ್ದ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರಿದ್ದ ವಿಶೇಷ ವಿಮಾನ ಲ್ಯಾಂಡ್‌ ಆಗಲು ಸಮಸ್ಯೆಯಾಯಿತು. ವಿಸಿಬಲಿಟಿ ಸಮಸ್ಯೆಯಿಂದಾಗಿ ಸುಮಾರು ಮೂರು ಸುತ್ತು ಹಾಕಿದ ಬಳಿಕ ವಿಮಾನ ಲ್ಯಾಂಡ್‌ ಆಯಿತು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ » ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆ, ಕೇಬಲ್‌ ಬ್ರಿಡ್ಜ್‌ ವೈಭವಕ್ಕೆ ಮನಸೋತ ಕೇಂದ್ರ ಸಚಿವ

ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರ ಭೇಟಿ ಹಿನ್ನೆಲೆ ಕೆಎಸ್‌ಐಐಡಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಕರೆ ಮಾಡಿದ್ದೆ. ಆಗ ಅವರು ಶೀಘ್ರ ಉಪಕರಣ ಅಳವಡಿಸುವ ಭರವಸೆ ನೀಡಿದ್ದಾರೆ ಎಂದು ಸಂಸದ ರಾಘವೇಂದ್ರ ತಿಳಿಸಿದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment