ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 3 FEBRUARY 2023
SHIMOGA : ವಿಐಎಸ್ಎಲ್ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಳಿ ನಿಯೋಗ (Delegation) ಕೊಂಡೊಯ್ಯಲು ಚಿಂತಿಸಲಾಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಸದ್ಯ ಮುಖ್ಯಮಂತ್ರಿ ಅವರು ಬಜೆಟ್ ಸಿದ್ಧತೆಯಲ್ಲಿದ್ದಾರೆ. ಬೆಜೆಟ್ ಬಳಿಕ ನಿಯೋಗ ಕೊಂಡೊಯ್ದು ಚರ್ಚೆ ನಡೆಸಲಾಗುತ್ತದೆ ಎಂದು ತಿಳಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದಾಗ ವಿಐಎಸ್ಎಲ್ ವಿಚಾರ ಚರ್ಚೆ ಮಾಡಿದ್ದೇವೆ. ಹಿಂದಿನ ಶ್ರೀಮಂತಿಕೆಯನ್ನು ಮರುಕಳಿಸುವ ಪ್ರಯತ್ನ ನಡೆಸಲಾಗುತ್ತದೆ. ಇವತ್ತು ವಿಐಎಸ್ಎಲ್ ಕಾರ್ಮಿಕರ ಮುಖಂಡರ ಸಭೆ ಕರೆಯಲಾಗಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್, 4900ಕ್ಕೂ ಹೆಚ್ಚು ಕೆಲಸಕ್ಕೆ ನಡೆಯಲಿದೆ ಸಂದರ್ಶನ